ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ 276 ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಮಾತ್ರ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಡಿಇಡಿ, ಬಿಇಡಿ ಆದವರಿಗೆ ಮಾಟೆಸ್ಸರಿ ತರಬೇತಿ ನೀಡಲಾಗುತ್ತದೆ. ಈ ಶಿಕ್ಷಕರಿಗೆ 7,500 ರೂ. ಮತ್ತು ಮಕ್ಕಳನ್ನು ನೋಡಿಕೊಳ್ಳುವ ಆಯಾಗಳಿಗೆ 5 ಸಾವಿರ ರೂ. ಗೌರವ ಸಂಭಾವನೆ ನೀಡಲು ನಿರ್ಧರಿಸಲಾಗಿದೆ.
ಇದೇ ವೇಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಎಂಜಿನಯರಿಂಗ್ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಕಲಿಕೆಗೆ ಒತ್ತು ಮೋಡಿವ ಬಗ್ಗೆಯೂ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ತೆಗೆದುಕೊಂಡಿದೆ.
For Daily Alerts