Reservation For Transgenders In Government Jobs : ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ

ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.1ರಷ್ಟು ಮೀಸಲಾತಿ

ಲೈಂಗಿಕ ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್ ನೀಡುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರ ಮಹತ್ತರ ಘೋಷಣೆಯನ್ನು ಮಾಡಿದೆ. ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲ ವರ್ಗದ ಉದ್ಯೋಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ.1ರಷ್ಟು ಮೀಸಲಾತಿ ನೀಡುವಂತೆ ಆದೇಶ ಹೊರಡಿಸಿದೆ.

 

1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ನ್ನು ತಿದ್ದುಪಡಿ ಮಾಡಲಾಗಿದ್ದು, ಎಲ್ಲಾ ನೇರ ನೇಮಕಾತಿಗಳಲ್ಲಿ ಸಾಮಾನ್ಯ ಅರ್ಹತೆ , ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡಾ ೧ರಷ್ಟು ಮೀಸಲಾತಿ ಲಭ್ಯವಿರುತ್ತದೆ. ಒಂದು ವೇಳೆ ಸರ್ಕಾರಿ ನೇರ ನೇಮಕಾತಿಯ ಸಂದರ್ಭದಲ್ಲಿ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಶೇಕಡಾ 1ರಷ್ಟು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಅಂತಹ ಹುದ್ದೆಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಕುರಿತು ಸಿದ್ದರಾಮಯ್ಯ ಸರ್ಕಾರದಲ್ಲಿ ಚಿಂತನೆಯನ್ನು ಆರಂಭಿಸಲಾಗಿತ್ತು. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka government has issued notification on 1% reservation for transgenders in government jobs.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X