Karnataka Graduate Teacher Recruitment 2022 : ಪದವೀಧರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಿಕ್ಷಕರ (5 ರಿಂದ 8) ನೇಮಕಾತಿ-2022ರ 1:2 ಅನುಪಾತದ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಾತ್ಕಾಲಿಕ ಪಟ್ಟಿಯನ್ನು ವೀಕ್ಷಿಸಬಹುದು.

 
ಸಾರ್ವಜನಿಕ ಶಿಕ್ಷಣ ಇಲಾಖೆಯ  ಪದವೀಧರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಪರಿಶೀಲನಾ ಪಟ್ಟಿ ರಿಲೀಸ್
ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡುವ ಸಂಬಂಧ ಮೇ 21,2022 ಮತ್ತು ಮೇ 22,2022 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕ ಮತ್ತು ಪದವಿ, ಬಿ.ಇಡಿ/ಡಿಎಲ್.ಇಡಿ/TET/CTET ಅಂಗಳನ್ನು ಹಾಗೂ CET ಅಂಕಗಳನ್ನು ನಿಯಮಾನುಸಾರ ಪರಿಗಣಿಸಿ, Derived Percentage ನೊಂದಿಗೆ ಆಗಸ್ಟ್ 17,2022 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು.

ನೇಮಕಾತಿ ಅಧಿಸೂಚನೆಯಲ್ಲಿರುವಂತೆ ಆನ್‌ಲೈನ್ ಅರ್ಜಿಯಲ್ಲಿ ಭರ್ತಿ ಮಾಡಿದ ಅಭ್ಯರ್ಥಿಯ ವೈಯಕ್ತಿಕ ವಿವರಗಳಾದ ಅಭ್ಯರ್ಥಿಯ ಹೆಸರು, ಅಭ್ಯರ್ಥಿಯ ತಂದೆ ಮತ್ತು ತಾಯಿಯ ಹೆಸರು, ಜನ್ಮದಿನಾಂಕ, ಪದವಿ, ಬಿ.ಇಡಿ/ಡಿ.ಎಲ್.ಇಡಿ ಮತ್ತು CTET/TET ಅಂಕಗಳಿಗೆ ಸಂಬಂಧಿಸಿದಂತೆ ಮಾತ್ರ ತಿದ್ದುಪಡಿಗೆ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಮದ್ದಾಗಿ ಈ ಕಛೇರಿಯಲ್ಲಿ ಮನವಿ ಸಲ್ಲಿಸಲು ದಿನಾಂಕ:18.08.2022 ರಿಂದ 24.08.2022 ಅವಕಾಶ ಕಲ್ಪಿಸಲಾಗಿತ್ತು.

ಅದರಂತೆ ಅಭ್ಯರ್ಥಿಗಳಿಂದ ತಿದ್ದುಪಡಿ ಕೋರಿ ಪೂರಕ ದಾಖಲೆಗಳೊಂದಿಗೆ ಸಲ್ಲಿಕೆಯಾದ ಮನವಿಗಳನ್ನು (ನೇಮಕಾತಿ ಅಧಿಸೂಚನೆಯಲ್ಲಿ ತಿದ್ದುಪಡಿಗೆ ಅವಕಾಶವಿರುವ ಅಂಶಗಳ ಕುರಿತಾಗಿರುವ ಮನವಿಗಳು ಮಾತ್ರ ಪರಿಗಣಿಸಿ, ಸಿ.ಎಸಿ ದತ್ತಾಂಶದಲ್ಲಿ ಇಂದೀಕರಿಸಲಾಗಿದೆ. ಅಭ್ಯರ್ಥಿಗಳ ಮನವಿಗಳಂತೆ ಸಿ.ಎ.ಸಿ ತಂತ್ರಾಂಶದಲ್ಲಿ ಇಂದೀಕರಿಸಿದ್ದರಿಂದ ಒಟ್ಟು 1325 ಅಭ್ಯರ್ಥಿಗಳ Derived Percentage ನಲ್ಲಿ ವ್ಯತ್ಯಾಸವಾಗಿರುತ್ತದೆ. ಅರ್ಜಿ ಸಂಖ್ಯೆ : 5184412 ಮತ್ತು 5139093 ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ CIET ಅಂಕಗಳನ್ನು ತಪ್ಪಾಗಿ ನಮೂದಿಸಿದ್ದರಿಂದ ಹಾಗೂ ಅಭ್ಯರ್ಥಿಗಳ ಮನವಿಯಂತೆ ಪ್ರಮಾಣಪತ್ರದಂತೆ ಅಂಕಗಳನ್ನು ದತ್ತಾಂಶದಲ್ಲಿ ಇಂದೀಕರಿಸಿದ ನಂತರ ನಿಯಮಾನುಸಾರ ಕನಿಷ್ಠ ಅರ್ಹತಾ ಅಂಕಗಳಿಂತ ಕಡಿಮೆಯಾದ ಕಾರಣ Reject ಆಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಪರೀಕ್ಷೆಯ ಪತ್ರಿಕೆ-2 ಮತ್ತು ಪತ್ರಿಕೆ-3ರ ವಿವರಣಾತ್ಮಕ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಮರುಎಣಿಕೆ | ಮರುಪರಿಶೀಲನೆ / ಮರುಮೌಲ್ಯಮಾಪನ ಮಾಡುವಂತೆ ಖುದ್ದಾಗಿ ಮತ್ತು ಅಂಚೆ ಮೂಲಕ 1213 ಮನವಿಗಳು ಸಲ್ಲಿಕೆಯಾಗಿದ್ದು, ಸದರಿ ಮನವಿಗಳನ್ನು ಪರಿಗಣಿಸಲು ಅಧಿಸೂಚನೆಯಂತೆ ನಿಯಮಗಳಲ್ಲಿ ಅವಕಾಶವಿಲ್ಲದ ಕಾರಣ ಪರಿಗಣಿಸಿರುವುದಿಲ್ಲ.

ಉತ್ತರಪತ್ರಿಕೆಗಳಲ್ಲಿ ತಮ್ಮ ವೈಯಕ್ತಿಕ ಗುರುತುಗಳನ್ನು ಬಹಿರಂಗಪಡಿಸಿ ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ ಹಾಗೂ ಇನ್ನಿತರ ಕಾರಣಗಳಿಗಾಗಿ 60 ಅಭ್ಯರ್ಥಿಗಳನ್ನು 1:2 ಅನುಪಾತದ ಪಟ್ಟಿಗೆ ಪರಿಗಣಿಸದೇ ಕೈಬಿಡಲಾಗಿದೆ. ಈ ಮೇಲ್ಕಂಡ ಅಂಶಗಳನ್ನು ಪರಿಗಣಿಸಿ, ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಮೂರೂ ಪತ್ರಿಕೆಗಳಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳು ಮತ್ತು ಶೈಕ್ಷಣಿಕ ಅರ್ಹತೆಯ ಅಂಕಗಳನ್ನು ನಿಯಮಾನುಸಾರ ಮೆಂಟ್‌ಗೆ ಪರಿಗಣಿಸಿ, ಪ್ರಚಲಿತ ಆಯ್ಕೆ ನಿಯಮಗಳು ಮತ್ತು ಮಾನದಂಡಗಳನ್ನು ಅನುಸರಿಸಿ, ಸಿದ್ಧಪಡಿಸಿರುವ 1:2 ಆನುಭಾಶದ ಪರಿಶೀಲನಾ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ದಿನಾಂಕ:27-09-2022ರಂದು ಬೆಂಗಳೂರು ವಿಭಾಗದ ಜಿಲ್ಲೆಗಳ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಿದೆ.

 

ಸೆಪ್ಟೆಂಬರ್ 28,2022ರ ಸಂಜೆ ಬೆಳಗಾವಿ ವಿಭಾಗದ ಜಿಲ್ಲೆಗಳ ಪಟ್ಟಿ, ಸೆಪ್ಟೆಂಬರ್ 29,2022ರ ಸಂಜೆ ಮೈಸೂರು ಹಾಗೂ ಕಲ್ಬುರ್ಗಿ ವಿಭಾಗದ ಜಿಲ್ಲೆಗಳ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗುವುದು. 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯಲ್ಲಿನ ಆಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ಕಛೇರಿಯಲ್ಲಿ ತಮ್ಮ ಮೂಲದಾಖಲೆಗಳ ಪರಿಶೀಲನೆಗೆ ಹಾಜರಾಗುವುದು. ಈ ಸಂಬಂಧ ವೇಳಾಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 30,2022ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಕರ್ನಾಟಕ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2022: ಪಟ್ಟಿಯನ್ನು ಪರಿಶೀಲಿಸುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ schooleducation.kar.nic.in ಗೆ ಭೇಟಿ ನೀಡಿ
ಸ್ಟೆಪ್ 2 : ಪ್ರತಿ ಜಿಲ್ಲೆಯ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3 : ನಿಮ್ಮ ಹೆಸರು/ರೋಲ್ ಸಂಖ್ಯೆಯನ್ನು ಪರಿಶೀಲಿಸಿ
ಸ್ಟೆಪ್ 4 : ಡೌನ್‌ಲೋಡ್ ಮಾಡಿ ಮತ್ತು ಪ್ರತಿಯನ್ನು ಇಟ್ಟುಕೊಳ್ಳಿ

ನೇಮಕಾತಿಗೆ ಸಂಬಂಧಿಸಿದ ಇತ್ತೀಚಿನ ನವೀಕರಣಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಆದ್ದರಿಂದ ಅಭ್ಯರ್ಥಿಗಳು ನಿಯಮಿತ ಪರಿಶೀಲನೆಯನ್ನು ಇರಿಸಿಕೊಳ್ಳಲು ಸಲಹೆ ನೀಡಲಾಗುತ್ತದೆ.

For Quick Alerts
ALLOW NOTIFICATIONS  
For Daily Alerts

English summary
Karnataka graduate teacher recruitment 2022 list has been released. Here is how to check.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X