Karnataka Guest Faculty Recruitment 2022 : ಅತಿಥಿ ಉಪನ್ಯಾಸಕರ ಅರ್ಜಿ ತಿದ್ದುಪಡಿಗೆ 2 ದಿನಗಳ ಕಾಲಾವಕಾಶ

2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳಿಗೆ ಅರ್ಜಿಯಲ್ಲಿನ ತಪ್ಪು ಮಾಹಿತಿಯನ್ನು ಸರಿಪಡಿಸಲು ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಅತಿಥಿ ಉಪನ್ಯಾಸಕ ಹುದ್ದೆಗಳ ಅರ್ಜಿ ತಿದ್ದುಪಡಿಗೆ 2 ದಿನಗಳ ಕಾಲಾವಕಾಶ

ಅತಿಥಿ ಉಪನ್ಯಾಸಕರ ನೇಮಕಾತಿಯ ಮೊದಲನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಮುಗಿದಿದ್ದು, ಬಹುತೇಕ ಅಭ್ಯರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಪ್ಪು ಮಾಹಿತಿಯನ್ನು ತುಂಬಿದ ಅಭ್ಯರ್ಥಿಗಳ ಅರ್ಜಿಯಯನ್ನು ಸರಿಪಡಿಸಲು ಮನವಿ ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳನ್ನು ಹೊರತುಪಡಿಸಿ, ತಪ್ಪು ಮಾಹಿತಿಯನ್ನು ಭರ್ತಿ ಮಾಡಿರುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಸರಿಪಡಿಸಲು ಫೆಬ್ರವರಿ 12 ಮತ್ತು ಫೆಬ್ರವರಿ 13 ರಂದು 2 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.

ಸದರಿ ಅಭ್ಯರ್ಥಿಗಳಿಗೆ ಕಾಲೇಜುಗಳಲ್ಲಿ ಲಭ್ಯವಿರುವ ಲಳಿಕೆ ಕಾರ್ಯಭಾರಕ್ಕೆ ಕೌನ್ಸೆಲಿಂಗ್ ಮೂಲಕ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವನ್ನು ಶೀಘ್ರದಲ್ಲಿ ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಅಭ್ಯರ್ಥಿಗಳು ಮತ್ತೊಮ್ಮೆ ತಪ್ಪು ಮಾಹಿತಿಯನ್ನು ಭರ್ತಿ ಮಾಡಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಸ್ಪಷ್ಟಪಡಿಸಲಾಗುವುದಿಲ್ಲ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka college education department allowed applicants for application correction for recruitment process of guest faculty posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X