
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ಜಡ್ಜ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆ ಫಲಿತಾಂವನ್ನು ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಘೋಷಿಸಲಾಗಿದೆ. ಉಚ್ಚ ನ್ಯಾಯಾಲಯ ನೇಮಕಾತಿಯ ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದಿದ್ದು, ಮುಖ್ಯ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯವು 94 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಆಗಸ್ಟ್ 10,2021ರಂದು ನಡೆಸಲಾಗಿದ್ದು, ಈ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 30,2021 ಮತ್ತು ಅಕ್ಟೋಬರ್ 1,2021ರಂದು ನಿಗದಿಪಡಿಸಲಾಗಿದ್ದು, ಪರೀಕ್ಷೆಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಬೇಕಿರುತ್ತದೆ. ಪರೀಕ್ಷಾ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.
ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ವೀಕ್ಷಿಸಲು ಮತ್ತು ಮುಖ್ಯ ಪರೀಕ್ಷೆಯ ದಿನಾಂಕ ಘೋಷಣೆಯ ಪ್ರಕಟಣೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











