KSLU Semester Exam : ಸೆಮಿಸ್ಟರ್ ಪರೀಕ್ಷೆ ನಡೆಸುವ ನಿರ್ಧಾರ ಕುರಿತು ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕೆಎಸ್‌ಎಲ್‌ಯು ಪರೀಕ್ಷೆ  ನಡೆಸುವ ನಿರ್ಧಾರ ಕುರಿತು ಪ್ರಶ್ನಿಸಿದ ಅರ್ಜಿ ಹೈಕೋರ್ಟ್ ನಿಂದ ವಜಾ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (ಕೆಎಸ್‌ಎಲ್‌ಯು) ಐದು ವರ್ಷಗಳ ಎಲ್‌ಎಲ್‌ಬಿ ಕೋರ್ಸ್ನ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ಕುರಿತು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

 

ಡಿಸೆಂಬರ್ ೧ರಂದು ಕೆಎಸ್‌ಎಲ್ ಯು ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸುವಂತೆ ಕೋರಿ ಕೆ ಪಿ ಪ್ರಭುದೇವ್‌ ಸೇರಿ ಒಂಭತ್ತು ಮಂದಿ ಹಾಗೂ ರಿಷಬ್‌ ಟ್ರಕ್‌ರಾವೊ ಸೇರಿದಂತೆ 65 ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಎರಡು ರಿಟ್‌ ಮನವಿಗಳನ್ನು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಲಾಗಿದೆ.

ವಿಚಾರಣೆಯ ವೇಳೆ ಡಿಸೆಂಬರ್ 15, 2021 ರಿಂದ ಪ್ರಾರಂಭವಾದ ಸೆಮಿಸ್ಟರ್ ಪರೀಕ್ಷೆಗಳಿಗೆ ಸುಮಾರು 70 ಪ್ರತಿಶತ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ವಿಶ್ವವಿದ್ಯಾಲಯದ ವಕೀಲರು ಸುಪ್ರೀಂ ಕೋರ್ಟ್ ತೀರ್ಪುಗಳು ಮತ್ತು ಬಾರ್ ಕೌನ್ಸಿಲ್ ಅನ್ನು ಅವಲಂಬಿಸಿದ್ದಾರೆ. ಪರೀಕ್ಷೆಗಳನ್ನು ನಡೆಸದಿದ್ದರೆ ವಿದ್ಯಾರ್ಥಿಗಳ ಪದವಿಗಳನ್ನು BCI ಪರಿಗಣಿಸುವುದಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಹೊರಡಿಸಿರುವ ತೀರ್ಪು ಮತ್ತು ಬಿಸಿಐ ಸುತ್ತೋಲೆಯನ್ನು ಉಲ್ಲೇಖಿಸಿದರು. ಕಾಲೇಜುಗಳು ನಡೆಸಿರುವ ಆನ್‌ಲೈನ್‌ ತರಗತಿಗಳಲ್ಲಿಯೂ ವಿದ್ಯಾರ್ಥಿಗಳು ಭಾಗವಹಿಸಿದ್ದರು" ಎಂದು ಪೀಠದ ಗಮನಸೆಳೆದಿದ್ದರು.

ಆದಾಗ್ಯೂ ಇಂದು ವಿಚಾರಣೆಯಲ್ಲಿ ಕರ್ನಾಟಕ ಹೈಕೋರ್ಟ್ ಕೆಎಸ್‌ಎಲ್‌ಯು ಬೆಂಗಳೂರಿನಲ್ಲಿ ನೆಲೆಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗದೆ ರಾಜ್ಯದ ಇತರ ಭಾಗಗಳ ವಿದ್ಯಾರ್ಥಿಗಳನ್ನು ಪರಿಗಣಿಸಬೇಕು ಎಂದು ಗಮನಿಸಿದೆ.

ಅರ್ಜಿದಾರರ ಪರ ವಕೀಲರು, ಸಾಕಷ್ಟು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗೆ ಹಾಜರಾಗಲು ಲ್ಯಾಪಟಾಪ್, ಇಂಟರ್‌ನೆಟ್ ಸೇರಿದಂತೆ ಯಾವುದೇ ಅಗತ್ಯ ಸೌಲಭ್ಯಗಳು ಇರಲಿಲ್ಲ. ಈ ಕಾರಣಕ್ಕಾಗಿಯೇ 3 ವರ್ಷದ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರಿಕ್ಷೆಗಳನ್ನು ಧಾರವಾಡ ಹೈಕೋರ್ಟ್ ಪೀಠ 2021ರ ಡಿಸೆಂಬರ್ 14ರಂದು ರದ್ದುಪಡಿಸಿ ಆದೇಶಿಸಿದೆ. ಅದೇ ರೀತಿಯಾಗಿ 5 ವರ್ಷದ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಬಾರದು ಎಂದು ಮನವಿ ಮಾಡಿದ್ದರು.

 

ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಯಾವುದೇ ವಿಧಾನದಲ್ಲಿಯಾದರೂ ಪರೀಕ್ಷೆ ನಡೆಸುವಂತೆ ಭಾರತೀಯ ವಕೀಲರ ಪರಿಷತ್ತು ಕೆಎಸ್‌ಎಲ್‌ಯುಗೆ ನಿರ್ದೇಶಿಸಿ ಸುತ್ತೋಲೆ ಹೊರಡಿಸಿದೆ. ಧಾರವಾಡ ಹೈಕೋರ್ಟ್ ಪೀಠ ಕೂಡ ಬಿಸಿಐ ಸುತ್ತೋಲೆಯನ್ನು ರದ್ದುಪಡಿಸಿಲ್ಲ. ಅದರ ಬದಲಿಗೆ ವಿದ್ಯಾರ್ಥಿಗಳನ್ನು ಪಾಸು ಮಾಡುವಂತೆ ಹೇಳಿದೆ.

ಕೆಎಸ್‌ಎಲ್‌ಯು ವಾದ ಪರಿಗಣಿಸಿದ ಪೀಠ ಈ ಪರೀಕ್ಷೆ ರದ್ದು ಕೋರಿದ್ದ ಅರ್ಜಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka high court dismissed a petition challenging the decision of KSLU to hold second and fourth semester exams for 5 year LLB course.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X