ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಮೆರಿಟ್ ಪಟ್ಟಿ, ಕಟ್ ಆಫ್ ಅಂಕಗಳು ಮತ್ತು ದಾಖಲೆ ಪರಿಶೀಲನೆ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಮೆರಿಟ್ ಪಟ್ಟಿ ಮತ್ತು ದಾಖಲೆ ಪರಿಶೀಲನೆಯ ದಿನಾಂಕಗಳನ್ನು ವೀಕ್ಷಿಸಬಹುದು.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿ ಶುಲ್ಕ ಪಾವತಿಸಲು ಸೆಪ್ಟೆಂಬರ್ 27,2021 ಕೊನೆಯ ದಿನವಾಗಿತ್ತು.
ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಮತ್ತು ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ ಮತ್ತು ದಾಖಲೆಗಳ ಪರಿಶೀಲನೆ ದಿನಾಂಕಗಳನ್ನು ಡಿಸೆಂಬರ್ 13,2021 ರಿಂದ ಡಿಸೆಂಬರ್ 23,2021ರ ವರೆಗೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯ ವರೆಗೆ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿಪಡಿಸಿರುವ ದಿನಾಂಕಗಳಲ್ಲಿ ದಾಖಲೆ ಪರಿಶೀಲನೆಗೆ ಕೆಳಗೆ ನೀಡಲಾಗಿರುವ ಕಚೇರಿ ವಿಳಾಸಕ್ಕೆ ಹಾಜರಾಗಬೇಕಿರುತ್ತದೆ.
ಕಚೇರಿ ವಿಳಾಸ:
Court Hall No.35 Ground Floor, High Court of Karnataka, Dr.Ambedkar Veedhi, Bengaluru - 560001.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











