
ಕರ್ನಾಟಕ ಉಚ್ಚ ನ್ಯಾಯಾಲಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆಯು ಜನವರಿ 9,2021ರಂದು ಮಧ್ಯಾಹ್ನ 2:30 ರಿಂದ ಸಂಜೆ 4:30ರ ವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಜಿಲ್ಲಾ ನ್ಯಾಯಾಧೀಶ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











