ಆಗಸ್ಟ್ 19ಕ್ಕೆ ನಿಗದಿಯಾಗಿರುವ ಕಾಮೆಡ್-ಕೆ ಪರೀಕ್ಷೆಗಳನ್ನು ಮುಂದೂಡಲು ಕರ್ನಾಟಕ ಹೈಕೋರ್ಟ್ ನಿರಾರಿಸಿದೆ. ಕೊರೋನಾ ಸೋಂಕು ದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು, ಆದರೆ ನ್ಯಾಯಾಲಯ ಪರೀಕ್ಷೆ ಮುಂದೂಡಿಕೆಗೆ ನಿರಾಕರಿಸಿದೆ.
ವಕೀಲ ಅಬ್ದುಲ್ ಮನ್ನಾನ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದ್ದು, ಈಗಾಗಲೆ ನಿಗಧಿಯಾಗಿರುವಂತೆ ಕಾಮೆಡ್-ಕೆ ಪರೀಕ್ಷೆ ಆಗಸ್ಟ್ 19ರಂದು ನಡೆಯಲಿದೆ.
70 ರಿಂದ 80 ಸಾವಿರ ವಿದ್ಯಾರ್ಥಿಗಳು ಕಾಮೆಡ್-ಕೆ ಪರೀಕ್ಷೆ ಬರೆಯುತ್ತಾರೆ. ಈ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ, ಪರೀಕ್ಷೆಯನ್ನು ಮುಂದೂಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು.
For Daily Alerts