Karnataka HC Civil Judge Result : ಫಲಿತಾಂಶ ವೀಕ್ಷಿಸುವುದು ಹೇಗೆ ?:

ಕರ್ನಾಟಕ ಉಚ್ಚ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶ ಹುದ್ದೆಗಳ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಸಿವಿಲ್ ನ್ಯಾಯಾಧೀಶ ಹುದ್ದೆಗಳ ಅಂತಿಮ ಫಲಿತಾಂಶ ಪ್ರಕಟ

ಕರ್ನಾಟಕ ಉಚ್ಚ ನ್ಯಾಯಾಲಯ 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಏಪ್ರಿಲ್ 27,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,700/- ರಿಂದ 44,770/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಅಂತಿಮ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಸಿವಿಲ್ ನ್ಯಾಯಾಧೀಶ ಹುದ್ದೆಗಳ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ನಂತರ ಅಭ್ಯರ್ಥಿಗಳು ಪಿಡಿಎಫ್ ಅನ್ನ್ಡು ತೆರೆಯಿರಿ
ಸ್ಟೆಪ್ 4 : ಅಲ್ಲಿ ಫಲಿತಾಂಶ ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಿ

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka high court released final results for civil judge posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X