Karnataka High Court Revised Main Exam : ಸಿವಿಲ್ ನ್ಯಾಯಾಧೀಶ ಹುದ್ದೆಗಳ ಮುಖ್ಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಉಚ್ಚ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶ ಹುದ್ದೆಗಳ ಮುಖ್ಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಇದೀಗ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

ಕರ್ನಾಟಕ ಉಚ್ಚ ನ್ಯಾಯಾಲಯ ಸಿವಿಲ್ ನ್ಯಾಯಾಧೀಶ ಹುದ್ದೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ರಿಲೀಸ್

ಕರ್ನಾಟಕ ಉಚ್ಚ ನ್ಯಾಯಾಲಯವು ಸೆಪ್ಟೆಂಬರ್ 10 ಮತ್ತು 11,2022ರಂದು ನಿಗದಿಪಡಿಸಲಾಗಿದ್ದ ಮುಖ್ಯ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಇದೀಗ ಅಕ್ಟೋಬರ್ 7 ಮತ್ತು 8,2022ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯವು 56 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಏಪ್ರಿಲ್ 22,2022 ರಿಂದ ಮೇ 23,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 38 ವರ್ಷ ವಯಸ್ಸು ಮತ್ತು ಇತರ ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು. ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,700/- ರಿಂದ 44,770/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಹೈಕೋರ್ಟ್ ಪರಿಷ್ಕೃತ ವೇಳಾಪಟ್ಟಿ 2022 ಅನ್ನು ಡೌನ್‌ಲೋಡ್ ಮಾಡುವುದು ಹೇಗೆ:

ಸ್ಟೆಪ್ 1 : ಕರ್ನಾಟಕ ಉಚ್ಚ ನ್ಯಾಯಾಲಯ ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಮುಖ್ಯ ಲಿಖಿತ ಪರೀಕ್ಷೆಯ ಮರುನಿಗದಿ ದಿನಾಂಕದ ಕುರಿತು ಪ್ರಕಟಣೆಯ ಲಿಂಕ್ ಅನ್ನು ಕ್ಲಿಕ್
ಮಾಡಿ.
ಸ್ಟೆಪ್ 3 : ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕರ್ನಾಟಕ ಹೈಕೋರ್ಟ್ ಪರಿಷ್ಕೃತ ವೇಳಾಪಟ್ಟಿ 2022ರ PDF ಅನ್ನು ಪಡೆಯುತ್ತೀರಿ.
ಸ್ಟೆಪ್ 4 : ಭವಿಷ್ಯದ ಉಲ್ಲೇಖಕ್ಕಾಗಿ ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka high court announced revised main exam 2022 dates for civil judge posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X