Karnataka High Court SDA Admit Card 2022 : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರಿನಲ್ಲಿ 142 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರಿಂದ 81,100/-ರೂಗಳ ವರೆಗೆ ವೇತವನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯನ್ನು ಮಾರ್ಚ್ 26,2022ರಂದು ಮಧ್ಯಾಹ್ನ 3 ರಿಂದ ಸಂಜೆ 4:30ರ ವರೆಗೆ ನಡೆಸಲು ನಿಗಧಿಪಡಿಸಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://karnatakajudiciary.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಸ್ಟೆಪ್ 4 : ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka high court released written exam admit card 2022 for second division assistant posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+