ರಾಜ್ಯದ ದ್ವಿತೀಯ ಪಿಯು ಪರೀಕ್ಷೆ ಮತ್ತು ಎನ್‌ಟಿಎ ನಡೆಸುವ ಜೆಇಇ ಪರೀಕ್ಷೆಯ ಕೆಲ ಪತ್ರಿಕೆಗಳು ಒಂದೇ ದಿನಾಂಕದಂದು ಬಂದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ವೇಳಾಪಟ್ಟಿಯನ್ನು (ತಾತ್ಕಾಲಿಕ) ಪರಿಷ್ಕರಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಏಪ್ರಿಲ್ 16ರಿಂದ ಮೇ 6ರವರೆಗೆ ನಡೆಸಲು ಈಗಾಗಲೇ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ ಈ ನಡುವೆ ಜೆಇಇ ಪರೀಕ್ಷೆಯ ಮೊದಲನೇ ಸೆಷನ್ ಏಪ್ರಿಲ್ 16 ರಿಂದ 21ರವರೆಗೆ ನಡೆಯಲಿದೆ ಎಂದು ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಜೆಇಇ ಹಾಗೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ದಿನಾಂಕಗಳು ಒಂದೇ ದಿನ ಇರುವುದರಿಂದ ಪಿಯು ಪರೀಕ್ಷೆಯ ಪರಿಷ್ಕರಿಸಿದ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಮಾರ್ಚ್ 5ರ ಸಂಜೆ 5 ಗಂಟೆಯೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಆಕ್ಷೇಪಣೆಗಳನ್ನು [email protected] ಇಮೇಲ್ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅಂಚೆ ಮೂಲಕ ಹಾಗೂ ನಿಗಧಿಪಡಿಸಿದ ದಿನಾಂಕದ ನಂತರ ಬಂದಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ:
ಎಪ್ರಿಲ್ 22, 2022: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಎಪ್ರಿಲ್ 23, 2022: ಹಿಂದಿ
ಎಪ್ರಿಲ್ 25, 2022: ಅರ್ಥಶಾಸ್ತ್ರ
ಎಪ್ರಿಲ್ 26, 2022: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ರಸಾಯನಶಾಸ್ತ್ರ
ಎಪ್ರಿಲ್ 27, 2022: ತಮಿಳು, ಮರಾಠಿ, ತೆಲಗು, ಮಲಯಾಳಮ್ ಉರ್ದು, ಸಂಸ್ಕೃತ, ಫ್ರೆಂಚ್
ಎಪ್ರಿಲ್ 28, 2022: ಕನ್ನಡ, ಅರೇಬಿಕ್
ಎಪ್ರಿಲ್ 30, 2022: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 02, 2022: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 04, 2022: ಇಂಗ್ಲಿಷ್
ಮೇ 05, 2022: ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್
ಮೇ 06, 2022: ಗಣಿತ, ಶಿಕ್ಷಣ, ಬೇಸಿಕ್ ಗಣಿತ
ಮೇ 07, 2022: ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 09, 2022: ಇತಿಹಾಸ, ಭೌತಶಾಸ್ತ್ರ
ಮೇ 11, 2022: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14,2022 ರಿಂದ ಮಾರ್ಚ್ 25,2022ರ ವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿ ಮಾಡಲಾಗಿದೆ. ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28,2022 ರಿಂದ ಏಪ್ರಿಲ್ 13,2022 ರ ವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇಕಡ.30 ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿದ್ದು, ಶೇಕಡ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇಕಡ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.


Click it and Unblock the Notifications











