
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶವನ್ನು ಈಗಾಗಲೇ ಪ್ರಕಟ ಮಾಡಿದ್ದು, ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಫಲಿತಾಂಶ ವೀಕ್ಷಿಸಿದ ಅಭ್ಯರ್ಥಿಗಳು ದಾಖಲೆಗಳ ಅಪ್‌ಲೋಡ್ ವೇಳಾಪಟ್ಟಿ ಮತ್ತು ಕೌನ್ಸೆಲಿಂಗ್ ಯಾವಾಗ ಎನ್ನುವ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.
ಪ್ರವೇಶಾತಿಗೆ ದಾಖಲೆಗಳ ಅಪ್‌ಲೋಡ್‌ಗೆ ವೇಳಾಪಟ್ಟಿ:

ಸಿಇಟಿ ಕೌನ್ಸೆಲಿಂಗ್ 2020:
ಜೆಇಇ, ನೀಟ್ ಮುಂತಾದ ಪರೀಕ್ಷೆಗಳ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪರಿಶೀಲಿಸಿ ಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಬಹುತೇಕ ಅಕ್ಟೋಬರ್‌ನಲ್ಲಿ ನಡೆಸುವುದು ಖಚಿತ. ಎಐಸಿಟಿ ಸೂಚನೆಯಂತೆ ಸಿಇಟಿ ಕೌನ್ಸೆಲಿಂಗ್ ನಡೆಯಲಿದೆ.
ಪ್ರವೇಶಾತಿ ಪಡೆಯುವುದು ಹೇಗೆ:
ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಪರಿಶೀಲನೆ ಮಾಡಿಕೊಳ್ಳಬೇಕು ತದನಂತರ ಅವರು ವೆಬ್‌ಸೈಟ್ ಮೂಲಕ ಕಾಲೇಜುಗಳ ಆಯ್ಕೆ ಮಾಡಿಕೊಳ್ಳಬಹುದು. 2ನೇ ಸುತ್ತಿನ ಕೌನ್ಸೆಲಿಂಗ್ ಮುಗಿಯುತ್ತಿದ್ದಂತೆ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕಾಲೇಜುಗಳಲ್ಲಿ ಸ್ವಲ್ಪವೂ ತಡ ಮಾಡದೇ ತಮ್ಮ ಮೂಲ ದಾಖಲೆಗಳನ್ನು ಸಲ್ಲಿಸಿ ಪ್ರವೇಶಾತಿ ಪಡೆಯಬಹುದು. ಒಂದು ವೇಳೆ ಶುಲ್ಕ ಪಾವತಿ ಮಾಡಿ ದಾಖಲೆಗಳನ್ನು ಸಲ್ಲಿಸದಿದ್ದರೆ ಆ ಪ್ರವೇಶಾತಿ ತಾನಾಗಿಯೇ ರದ್ದಾಗುತ್ತದೆ


Click it and Unblock the Notifications











