ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೂತನ ಕರ್ನಾಟಕ ಲರ್ನಿಂಗ್ ಮ್ಯಾನೇಜ್ಮೆಂಟ್ ಸಿಸ್ಟಂ ಗೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ. 4.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮತ್ತು 24 ಸಾವಿರ ಶಿಕ್ಷಕರ ಬೋಧನೆಗೂ ಇದು ಉತ್ತಮ ರೀತಿಯಲ್ಲಿ ಸಹಾಯಕವಾಗಲಿದೆ.
ಕೆಎಲ್ಎಂಎಸ್ ದೇಶದಲ್ಲೇ ಪ್ರಥಮ ಮತ್ತು ಹೊಸ ಕ್ರಮವಾಗಿದ್ದು, ಇದು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ. ವಿಶ್ವವಿದ್ಯಾಲಯಗಳ ಪಠ್ಯಕ್ಕೆ ಪೂರಕವಾದ ಸ್ವ-ಕಲಿಕೆ ಮತ್ತು ಬೋಧನೆಗೆ ಸೂಕ್ತವಾದ ರೂಪದಲ್ಲಿ ಇದನ್ನು ಅಭಿವೃದ್ದಿಗೊಳಿಸಲಾಗಿದೆ. ವಿದ್ಯಾರ್ಥಿಗಳು ಯಾವಾಗ ಬೇಕಾದರೂ ಮತ್ತು ಎಲ್ಲಿಂದ ಬೇಕಾದರೂ ಕೆಎಲ್ಎಂಎಸ್ ಮೂಲಕ ಕಲಿಕೆ ಮಾಡಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
For Quick Alerts
For Daily Alerts