No examinations for Classes 1 to 9: 1 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್

ಶಿಕ್ಷಣ ಇಲಾಖೆಯಿಂದ ಮಹತ್ವ ಆದೇಶ...ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳು ಪಾಸ್

ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ವಾ‍ರ್ಷಿಕ ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಸರ್ಕಾರ ನಿರ್ಧರಿಸಿದೆ.

ಏಪ್ರಿಲ್ 30ರೊಳಗೆ ಮೌಲ್ಯಾಂಕನ ವಿಶ್ಲೇಷಣೆ ನಡೆಸಿ ಫಲಿತಾಂಶ ಪ್ರಕಟಿಸಲು ಶಾಲೆಗಳಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಪ್ರಗತಿ ಪತ್ರದಲ್ಲಿ ದಾಖಲಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಬಡ್ತಿ ನೀಡಲು ಅವಕಾಶ ನೀಡಿದೆ.

ಸದರಿ 1 ರಿಂದ 9ನೇ ತರಗತಿಯ ಮೌಲ್ಯಾಂಕನದ ಉದ್ದೇಶ ವಿದ್ಯಾರ್ಥಿಗಳನ್ನು ಉತ್ತೀರ್ಣ/ಅನುತ್ತೀರ್ಣ ಎಂದು ತೀರ್ಮಾನಿಸುವುದಲ್ಲ. ಬದಲಾಗಗಿ ಅವರ ಕಲಿಕೆಯ ಪ್ರಗತಿ ಹಾಗೂ ಕೊರತೆಯನ್ನು ತಿಳಿದು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮವನ್ನು ನಡೆಸಿ ಈ ಕೊರತೆಯನ್ನು ತುಂಬಲು ಕ್ರಮವಹಿಸಲು ಶಾಲಾವಾರು ಯೋಜನೆಯನ್ನು ತಯಾರಿಸಲು ತಿಳಿಸಿದೆ.

2021[22ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಪುನರಾರಂಭವಾದ ನಂತರ ಈ ಮಕ್ಕಳಿಗೆ ಕಳೆದ ಸಾಲಿನಲ್ಲಿ ಹಿಂದಿನ ತರಗತಿಯಲ್ಲಿನ ಕಲಿಕಾ ಸಾಮರ್ಥ್ಯಗಳ ಬಗ್ಗೆ ನೈದಾನಿಕ ಪರೀಕ್ಷೆ ನಡೆಸಿ ಅವರಲ್ಲಿ ಇರುವ ಕಲಿಕಾ ಕೊರತೆಯನ್ನು ಗುರುತಿಸುವುದು. ಈ ಕೊರತೆಗಳು ಹಾಗೂ ಹಿಂದಿನ ವರ್ಷ ಪಟ್ಟಿ ಮಾಡಿ ಇಟ್ಟುಕೊಂಡಿದ್ದ ಕಲಿಕಾ ಕೊರತೆಗಳನ್ನಾಧರಿಸಿ ಪ್ರತಿ ಮಗುವಿನವಾರು ನಿರ್ಧಿಷ್ಟ ತಂತ್ರಗಳನ್ನು ರೂಪಿಸಿ ಸೇತುಬಂಧ ಕಾರ್ಯಕ್ರಮ ಮುಖೇನ ಪರಿಹಾರ ಬೋಧನೆ ನಡೆಸುವುದು. ನಂತರ ಸಾಫಲ್ಯ ಪರೀಕ್ಷೆ ನಡೆಸಿ ಮಕ್ಕಳಲ್ಲಿ ಕಲಿಕೆ ಆಗಿರುವುದನ್ನು ದೃಢೀಕರಿಸಿ ಮುಂದಿನ ತರಗತಿಯ ಪಠ್ಯಾಧಾರಿತ ಕಲಿಕಾಂಶಗಳ ಬೋಧನೆಯನ್ನು ಆರಂಭಿಸುವುದು.

ಈ ಮೌಲ್ಯಾಂಕನ ವಿಶ್ಲೇಷಣೆ ಮಾರ್ಗಸೂಚಿ ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೆ ಮಾತ್ರ ಅನ್ವಯಿಸುತ್ತದೆ. ಉಳಿದಂತೆ ಇತರೆ ಪಠ್ಯಕ್ರಮದ ಶಾಲೆಗಳು ಆಯಾ ಸಕ್ಷಮಪ್ರಾಧಿಕಾರಿಗಳು ಸೂಚನೆ ನೀಡಿದಂತೆ ಕ್ರಮವಹಿಸಬಹುದು.

ರಾಜ್ಯದಲ್ಲಿ ಜೂನ್ 21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಿಗದಿಯಾಗಿದ್ದು, ಈ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka education department cancelled exam for class 1 to 9, All students will be promoted.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X