ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2020ನೇ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಾತಿಗೆ ನಡೆಸುವ ಪಿಜಿಸಿಇಟಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದ್ದು, ಜುಲೈ 07-2020 ರ ಸಂಜೆ 06-30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಜುಲೈ 8,2020 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ.
ಕೊರೋನಾ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಈಗಾಗಲೇ ಪ್ರಕಟಿಸಿದ ಕೇಂದ್ರಗಳ ಜೊತೆ ಹೆಚ್ಚುವರಿಯಾಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿ ಆಯ್ಕೆ ಮಾಡಿಕೊಳ್ಳಬಹುದು ಮತ್ತು ಈ ಮೊದಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯವಿದ್ದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಜೊತೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿನ ಮಾಹಿತಿ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.


Click it and Unblock the Notifications











