Karnataka PGCET Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೋಸ್ಟ್ ಗ್ರಾಜುಯೇಟ್ ಸಿಇಟಿ (ಪಿಜಿಸಿಇಟಿ) 2021ರ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಪಿಜಿಸಿಇಟಿ  ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಪಿಜಿಸಿಇಟಿ ಪರೀಕ್ಷೆಯನ್ನು ಎಂಬಿಎ/ಎಂಸಿಎ/ಎಂಇ/ಎಂ.ಟೆಕ್/ಎಂ.ಆರ್ಕ್ ಕೋರ್ಸ್ ಗಳಿಗೆ ಅಂಗಸಂಸ್ಥೆಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಪ್ರವೇಶ ಪಡೆಯಲು ನಡೆಸಲಾಗುತ್ತದೆ. ಪಿಜಿಸಿಇಟಿ ಪರೀಕ್ಷೆಯನ್ನು ನವೆಂಬರ್ 11 ಮತ್ತು ನವೆಂಬರ್ 14,2021ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಆಧರಿಸಿ ಅರ್ಹತೆ ಅಥವಾ ಶ್ರೇಣಿ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ತದನಂತರ ಅಧಿಕೃತ ಸೈಟ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

"ಅಗತ್ಯವಿರುವ ಶೇಕಡಾವಾರು ಅಂಕಗಳನ್ನು ಪಡೆದಿರುವ ಎಲ್ಲಾ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಹತೆ / ಶ್ರೇಣಿಯ ಕ್ರಮದಲ್ಲಿ ದಾಖಲೆ ಪರಿಶೀಲನೆ ಪ್ರಕ್ರಿಯೆಗೆ ಹಾಜರಾಗಬೇಕಿರುತ್ತದೆ. ನಂತರದಲ್ಲಿ ನಿಗದಿತ ವೇಳಾಪಟ್ಟಿಯ ಅನುಸಾರ ಆನ್‌ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ" ಎಂದು ಕರ್ನಾಟಕ PCET 2021ರ ಅಧಿಕೃತ ಮಾಹಿತಿ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಎಂಇ/ಎಂಟೆಕ್/ಎಂಆರ್ಕ್ ಕೋರ್ಸ್ ಗಳಿಗೆ PGCET 2021 ಪರೀಕ್ಷೆಯನ್ನು ಟೈಪ್ A ಮತ್ತು ಟೈಪ್ B ಪರೀಕ್ಷೆಗಳಿಗಾಗಿ ನವೆಂಬರ್ 11 ರಂದು ನಡೆಸಲಾಗುತ್ತದೆ. ಟೈಪ್ ಎ ಪರೀಕ್ಷೆಯು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು ಟೈಪ್ ಬಿ ಪರೀಕ್ಷೆಯು ಮಧ್ಯಾಹ್ನ 2:30 ರಿಂದ ಸಂಜೆ 4:30 ರವರೆಗೆ ನಡೆಯಲಿದೆ.

ಎಂಬಿಎ/ಎಂಸಿಎ ಕೋರ್ಸ್ ಗಳಿಗಾಗಿ ಪಿಜಿಸಿಇಟಿ 2021 ಅನ್ನು ನವೆಂಬರ್ 14 ರಂದು ನಡೆಸಲಾಗುವುದು. ಎಂಸಿಎ ಪರೀಕ್ಷೆಯು ಬೆಳಿಗ್ಗೆ 10:30 ರಿಂದ 12:30 ರವರೆಗೆ ಮತ್ತು ಎಂಬಿಎ ಪರೀಕ್ಷೆಯನ್ನು ಮಧ್ಯಾಹ್ನ 2:30 ರಿಂದ 4:30 ರವರೆಗೆ ನಡೆಸಲಾಗುತ್ತದೆ.

ಪಿಜಿಸಿಇಟಿ 2021 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಪಿಜಿಸಿಇಟಿ 202೧ರ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರ ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಬೇಕಿರುತ್ತದೆ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
KEA released admit card for karnataka pgcet exams in official website. Read on to know how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+