Karnataka PGCET Results 2020 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಸಿಇಟಿ 2020 ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ಪಿಜಿಸಿಇಟಿ  2020 ಫಲಿತಾಂಶ ಪ್ರಕಟ

 

2020ನೇ ಸಾಲಿನ ಎಂಇ/ಎಂಟೆಕ್/ಎಂ.ಅರ್ಕ್, ಎಂ.ಸಿ.ಎ, ಎಂಬಿಎ ಕೋರ್ಸ್ ಗಳ ಪ್ರವೇಶಾತಿಗೆ ಅಕ್ಟೋಬರ್ 13 ಮತ್ತು ಅಕ್ಟೋಬರ್ 14,2020ರಂದು ನಡೆದ ಪಿಜಿಸಿಇಟಿ-2020ರ ಪರೀಕ್ಷೆಯನ್ನು ನಡೆಸಲಾಗಿತ್ತು.

ದಾಖಲೆಗಳ ಪರಿಶೀಲನಾ ವೇಳಾಪಟ್ಟಿಯನ್ನು ಸದ್ಯದಲ್ಲಿಯೇ ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದು. ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳು ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪಿಜಿಸಿಇಟಿ-2020ರ ಮಾಹಿತಿ ಪುಸ್ತಕದಲ್ಲಿ ನೀಡಲಾಗಿದೆ ಹಾಗೂ ಎಲ್ಲಾ ಮೂಲ ದಾಖಲೆಗಳನ್ನು/ಪ್ರಮಾಣ ಪತ್ರಗಳನ್ನು ಅರ್ಹತಾ ಕಂಡಿಕೆಗೆ ಅನುಗುಣವಾಗಿ ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಿದೆ. ದಾಖಲೆಗಳ ಪರಿಶೀಲನೆಯ ಸಮಯದಲ್ಲಿ ಮೂಲ ದಾಖಲೆಗಳನ್ನು ಹಾಜರು ಪಡಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳು 2020ನೇ ಸಾಲಿನ ಎಂಇ/ಎಂಟೆಕ್/ಎಂ.ಆರ್ಕ್, ಎಂ.ಸಿ.ಎ, ಎಂಬಿಎ ಕೋರ್ಸ್ ಗಳ ಸೀಟು ಹಂಚಿಕೆಗೆ ಅರ್ಹತೆಯನ್ನು ಪಡೆಯುವುದಿಲ್ಲ.

ಪಿಜಿಸಿಇಟಿ 2020 ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.

ಸ್ಟೆಪ್ 2: ನಂತರ ಪಿಜಿಸಿಇಟಿ 2020 ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ

ಸ್ಟೆಪ್ 4: ನಂತರ ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು

ಸ್ಟೆಪ್ 5: ಫಲಿತಾಂಶ ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಬಹುದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KEA released PGCET 2020 results. Here is how to check results. read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X