ಕರ್ನಾಟಕ ಕಾರಾಗೃಹ ಇಲಾಖೆಯ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 662 ಜೈಲರ್ ಮತ್ತು ವಾರ್ಡರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 9 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ,ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಿದ್ದು, ಇದೇ ಜೂನ್ 23 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.
ಕರ್ನಾಟಕ ಕಾರಾಗೃಹ ಇಲಾಖೆಯ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಕರ್ನಾಟಕ ಕಾರಾಗೃಹ ಇಲಾಖೆಯ ಅಧಿಕೃತ ವೆಬ್ ಸೈಟ್ http://www.karnatakaprisons.in/indexkannada.html ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " ನೇಮಕಾತಿ 2019"ರ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಪುಟದ ಮೇಲ್ಭಾಗದಲ್ಲಿ ಇರುವ MY APPLICATION ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ Application No / ಅರ್ಜಿ ಸಂಖ್ಯೆ ಮತ್ತು Date of Birth / ಹುಟ್ಟಿದ ದಿನಾಂಕ ನೀಡಿ ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ
ಸ್ಟೆಪ್ 5: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಕಾಣುವ ಪ್ರವೇಶ ಪತ್ರವನ್ನು ಡೌನಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











