ರಾಜ್ಯ ಪೊಲೀಸ್ ಇಲಾಖೆಯ ರಾಜ್ಯ ಕಾರಾಗೃಹಗಳ ಇಲಾಖೆಯಲ್ಲಿನ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಕ್ಕೆ ಜೂನ್ 23 ರಂದು ನಡೆಸಿದ್ದ ಲಿಖಿತ ಪರೀಕ್ಷೆಯ ಅಂತಿಮ ಕೀ-ಉತ್ತರವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಕೀ ಉತ್ತವನ್ನು ಪರಿಶೀಲಿಸಬಹುದಾಗಿದೆ.
ರಾಜ್ಯ ಕಾರಾಗೃಹ ಇಲಾಖೆಯು ಒಟ್ಟು 662 ಜೈಲರ್ ಮತ್ತು ವಾರ್ಡರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 9,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ,ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಲಿಖಿತ ಪರೀಕ್ಷಾ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಮುಂದಿನ ಹಂತದ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.
ಕೀ ಉತ್ತರಗಳನ್ನು ಪಡೆಯುವ ವಿಧಾನ:
ಸ್ಟೆಪ್ 1: ಅಭ್ಯರ್ಥಿಗಳು ಅಭ್ಯರ್ಥಿಗಳು ರಾಜ್ಯ ಕಾರಾಗೃಹಗಳ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.karnatakaprisons.in/indexkannada.html ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ನೇಮಕಾತಿ 2019ರ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: Warder Final Key Answer ಅಥವಾ Jailor Final Key Answerನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಕೀ ಉತ್ತರವನ್ನು ಓದಿಕೊಳ್ಳಬಹುದು