ರಾಜ್ಯದಾದ್ಯಂತ ಶಾಲೆ ಹಾಗೂ ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಶಾಲಾ ಆವರಣದಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಭೆ ಮತ್ತು ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಭಾವುಟ, ಫ್ಲೆಕ್ಸ್, ತಟ್ಟೆ, ಲೋಟ, ಚಮಟ, ಥರ್ಮಕೋಲ್ ಹಾಗೂ ಪ್ಲಾಸ್ಟಿಕ್ ಬೀಡ್ಸ್ ಗಳಿಂದ ತಯಾರಾದ ವಸ್ತುಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಎಲ್ಲಾ ಜಿಲ್ಲೆಗಳ ಉಪನಿರ್ದೇಶರು ಮತ್ತು ಬಿಇಒಗಳಿಗೆ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ನಾಗೇಶ್ ಅವರು ಶಾಲೆ ಹಾಗೂ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ಲಾಸ್ಟಿಕ್ ಒಳಗೊಂಡ ಹೂಗುಚ್ಚ, ಪ್ಲಾಸ್ಟಿಕ್ ಹಾಳೆ/ಕಾಗದಿದಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕಡಿವಾಣ ಹಾಕಿದ್ದಾರೆ. ಇದಕ್ಕೆ ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.