Karnataka 2nd PUC Time Table 2022 : ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೊತೆಗೆ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆಯನ್ನು ಸಹ ಮಾಡಿದೆ.

ಕರ್ನಾಟಕ  ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ವೇಳಾಪಟ್ಟಿಯ ಪ್ರಕಾರ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಫೆಬ್ರವರಿ 17,2022 ರಿಂದ ಮಾರ್ಚ್ 25,2022ರ ವರೆಗೆ ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ  ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14,2022 ರಿಂದ ಮಾರ್ಚ್ 25,2022ರ ವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿ ಮಾಡಲಾಗಿದೆ.

ಕರ್ನಾಟಕ  ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16,2022 ರಿಂದ ಮೇ 4,2022ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ  ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಕರ್ನಾಟಕ  ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28,2022 ರಿಂದ ಏಪ್ರಿಲ್ 13,2022 ರ ವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಜನವರಿ 18,2022 ರಿಂದ ಫೆಬ್ರವರಿ 1,2022ರ ವರೆಗೆ ಅಂದರೆ 15 ದಿನಗಳ ಒಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದ್ದು, [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಆಕ್ಷೇಪಣೆಯನ್ನು ಸಲ್ಲಿಸಬಹುದು.

ದ್ವಿತೀಯ ಪಿಯುಸಿ ವಿಷಯವಾರು ತಾತ್ಕಾಲಿಕ ವೇಳಾಪಟ್ಟಿ :

ಏಪ್ರಿಲ್​ 16,2022 ಗಣಿತ
ಏಪ್ರಿಲ್​ 18,2022 ರಾಜ್ಯಶಾಸ್ತ್ರ
ಏಪ್ರಿಲ್ 19,2022 ಮಾಹಿತಿ ತಂತ್ರಜ್ಞಾನ
ಏಪ್ರಿಲ್ 20,2022 ಇತಿಹಾಸ
ಏಪ್ರಿಲ್ 21,2022 ಉರ್ದು ಮತ್ತು ಸಂಸ್ಕೃತ
ಏಪ್ರಿಲ್ 22,2022 ತರ್ಕಶಾಸ್ತ್ರ
ಏಪ್ರಿಲ್ 23,2022 ಕರ್ನಾಟಕ ಸಂಗೀತ
ಏಪ್ರಿಲ್ 25,2022 ಅರ್ಥಶಾಸ್ತ್ರ
ಏಪ್ರಿಲ್ 26,2022 ಹಿಂದಿ
ಏಪ್ರಿಲ್ 28,2022 ಐಚ್ಛಿಕ ಕನ್ನಡ
ಏಪ್ರಿಲ್ 29,2022 ಕನ್ನಡ
ಏಪ್ರಿಲ್ 30,2022 ಸಮಾಜಶಾಸ್ತ್ರ
ಮೇ 2,2022 ಭೋಗೋಳಶಾಸ್ತ್ರ
ಮೇ 4,2022 ಇಂಗ್ಲೀಷ್

2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇಕಡ.30 ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿದ್ದು, ಶೇಕಡ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇಕಡ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗಿದೆ.

ಇನ್ನು ಪ್ರಥಮ ಪಿಯುಸಿ ಭಾಷಾ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದ ಶೇಕಡ 30 ರಷ್ಟು ಪಠ್ಯಕ್ರಮವನ್ನು 2021-22ನೇ ಸಾಲಿನಲ್ಲಿಯೂ ಕಡಿತಗೊಳಿಸಲಾಗಿದೆ. ಐಚ್ಛಿಕ ವಿಷಯಗಳಲ್ಲಿ ಶೇಕಡ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.

For Quick Alerts
ALLOW NOTIFICATIONS  
For Daily Alerts

English summary
Karnataka pu board released puc exam temporary time table. Exam begins from april 16 and here is the complete details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X