ಕ ರ ವೇ ಮೂಲಕ ಉಚಿತ ಬ್ಯಾಂಕಿಂಗ್ ಪರೀಕ್ಷೆ ತರಬೇತಿ ಶಿಬಿರ

ಕರ್ನಾಟಕ ರಕ್ಷಣಾ ವೇದಿಕೆಯ "ಐಟಿ ಘಟಕ" ಈ ಬಾರಿ ಬ್ಯಾಂಕಿಂಗ್ ಪರೀಕ್ಷೆ ಬರೆಯುವ ಕನ್ನಡದ ಅಭ್ಯರ್ಥಿಗಳಿಗೆ ಈ ಉಚಿತ ಮಾರ್ಗದರ್ಶನ ಶಿಬಿರವನ್ನು ಹಮ್ಮಿಕೊಂಡಿದೆ.

ಕರ್ನಾಟಕದ ಅತಿ ದೊಡ್ಡ ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಚಿತ ಬ್ಯಾಂಕಿಂಗ್ ಪರೀಕ್ಷೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡಿಗ ಉದ್ಯೋಗಾರ್ಥಿಗಳ ಅನುಕೂಲಕ್ಕಾಗಿ ಕಳೆದ ಎರಡು ವರ್ಷಗಳಿಂದ ಹಲವಾರು "ಉದ್ಯೋಗ ಮಾರ್ಗದರ್ಶನ ಶಿಬಿರ"ಗಳನ್ನು ಯಶಸ್ಚಿಯಾಗಿ ಆಯೋಜಿಸಿಕೊಂಡು ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ "ಐಟಿ ಘಟಕ" ಈ ಬಾರಿ ಬ್ಯಾಂಕಿಂಗ್ ಪರೀಕ್ಷೆ ಬರೆಯುವ ಕನ್ನಡದ ಅಭ್ಯರ್ಥಿಗಳಿಗೆ ಈ ಉಚಿತ ಮಾರ್ಗದರ್ಶನ ಶಿಬಿರವನ್ನು ಹಮ್ಮಿಕೊಂಡಿದೆ.

ಉಚಿತ ಬ್ಯಾಂಕಿಂಗ್ ಪರೀಕ್ಷೆ ತರಬೇತಿ ಶಿಬಿರ

ಬೆಂಗಳೂರು ಮಹಾನಗರದಲ್ಲಿ ಸುಮಾರು ಎರಡು ದಶಕಗಳ ಹಿಂದೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆದ ಬೆಳವಣಿಗೆಗಳಿಂದ ಹೊಸ ಬ್ಯಾಂಕ್ ಗಳು ಹಾಗು ಸಾವಿರಾರು ಅವಕಾಶಗಳು ವರ್ಷದಿಂದ ವರ್ಷಕ್ಕೆ ಹುಟ್ಟಿಕೊಳ್ಳುತ್ತಿವೆ. ಈ ಅವಕಾಶಗಳಿಗೆ ದೇಶದ ಎಲ್ಲ ಭಾಗಗಳಿಂದಲೂ ಜನರು ಅರ್ಜಿ ಸಲ್ಲಿಸುತ್ತಿದ್ದಾರೆ. ಕರ್ನಾಟಕದಲ್ಲಿನ ಬ್ಯಾಂಕ್ ಉದ್ಯೋಗವನ್ನು ಹುಡುಕುತ್ತಿರುವ ಕನ್ನಡಿಗರಿಗೆ "ಬ್ಯಾಂಕಿಂಗ್ ಪರೀಕ್ಷೆಗಳನ್ನು ಎದುರಿಸುವುದು ಹೇಗೆ?" ಎನ್ನುವ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿದೆ.

ವಿವರಗಳು ಹೀಗಿವೆ

ದಿನಾಂಕ: ಆಗಸ್ಟ್ 20, 2017,
ಭಾನುವಾರ ಸಮಯ: ಮಧ್ಯಾಹ್ನ 3:30 ರಿಂದ 6:30 ರವರೆಗೆ

ಸ್ಥಳ: ಬಿ.ಎಂ.ಶ್ರೀ ಕಲಾ ಭವನ (ಸ್ಮಾರಕ ಪ್ರತಿಷ್ಠಾನ) , 3 ನೇ ಮುಖ್ಯ ರಸ್ತೆ, ಏನ್.ಆರ್.ಕಾಲೋನಿ , ಬಸವನಗುಡಿ, ಬೆಂಗಳೂರು

ನೊಂದಣಿ: ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು ಈ ನೋಂದಾವಣಿ ಪತ್ರವನ್ನು ತುಂಬಬೇಕು. ಅರ್ಜಿ ತುಂಬಲು ಈ ಲಿಂಕ್ ಕ್ಲಿಕ್ ಮಾಡಿ

ಕರ್ನಾಟಕ ರಕ್ಷಣಾ ವೇದಿಕೆ ಅಥವಾ ಕ.ರ.ವೆ ಕರ್ನಾಟಕದ ಅತಿ ದೊಡ್ಡ ಕನ್ನಡ ಪರ ಸಂಘಟನೆಯಾಗಿದ್ದು, ವಿಶ್ವದಾದ್ಯಂತ ಸುಮಾರು 50 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಇದನ್ನು ಶ್ರೀ ನಾರಾಯಣ ಗೌಡ ಮತ್ತು ಜಾಣಗೆರೆ ವೆಂಕಟರಾಮಯ್ಯ ಸ್ಥಾಪಿಸಿದ್ದು, ಗೌಡರ ಅಧ್ಯಕ್ಷತೆಯಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ಹಬ್ಬಿದೆ.

ಈ ಸಂಘಟನೆಯು "ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು"ಯೆಂಬ ಘೋಷಣೆಯಡಿ ಕಾರ್ಯ ನಿರ್ವಹಿಸುತ್ತಿದೆ ಹಾಗೂ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧವಿಲ್ಲ.

ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ನಾಡು ನುಡಿಯ ವಿಚಾರವಾಗಿ ಕಳೆದ 15 ವರ್ಷಗಳಿಂದ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆ ಐಟಿ ಘಟಕದ ಮುಖ್ಯ ಧ್ಯೇಯೋದ್ದೇಶಗಳು

  • ಕನ್ನಡಿಗ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮಾರ್ಗದರ್ಶನ ನೀಡುವುದು.
  • ಕನ್ನಡಿಗ ಯುವಕ ಯುವತಿಯರಿಗೆ ಸಹಕಾರಿಯಾಗುವಂತಹ ಉದ್ಯೋಗ ಮಾಹಿತಿ ಕೇಂದ್ರವನ್ನು ನಡೆಸಲಾಗುತ್ತಿದೆ.
  • ಬೇರೆ ಬೇರೆ ಕ್ಷೇತ್ರದಲ್ಲಿರುವ ಉದ್ಯೋಗದ ಅವಕಾಶಗಳನ್ನು ಕನ್ನಡಿಗರಿಗೆ ತಲುಪಿಸುವ ಸಲುವಾಗಿ ಕರವೇ_ಉದ್ಯೋಗ(krv_udyoga) ಎಂಬ ಟ್ವಿಟರ್ ಕೂಡ ನಡೆಸಲಾಗುತ್ತಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Information Technology unit of Karnataka Rakshana Vedike(Karave) has organised a guidance camp on a topic 'How to prepare for Banking exams'. The event is on Aug 20, 2017 at BMSri Kalabhavana, Basavanagudi, Bengaluru.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+