VTU 1st Sem Exams : ಮೊದಲ ಸೆಮಿಸ್ಟರ್ ಉಳಿದ ಇಂಜಿನಿಯರಿಂಗ್ ಪರೀಕ್ಷೆಗಳು ಮುಂದುವರೆಯಲಿವೆ

ವಿಟಿಯು ಮೊದಲ ಸೆಮಿಸ್ಟರ್ ನ ಇಂಜಿನಿಯರಿಂಗ್ ಪರೀಕ್ಷೆಗಳು ನಡೆಯಲಿವೆ

ಕೊರೋನಾ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮೇ 4ರ ವರೆಗೆ ವೀಕೆಂಡ್ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ಅನ್ನು ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಮೊದಲ ಸೆಮಿಸ್ಟರ್ ನ ಉಳಿದ ಇಂಜಿನಿಯರಿಂಗ್ ಪರೀಕ್ಷೆಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದೆ.

 

ಈಗಾಗಲೇ ನಿಗದಿಯಾಗಿರುವ ದಿನಾಂಕಗಳಲ್ಲಿ ಮೊದಲ ಸೆಮಿಸ್ಟರ್ ನ ಉಳಿದ ಪರೀಕ್ಷೆಗಳನ್ನು ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ನಡೆಸಲಾಗುವುದು ಎಂದು ರಿಜಿಸ್ಟ್ರಾರ್ ಪ್ರೊ.ಎ.ಎಸ್ ದೇಶಪಾಂಡೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಒಂದು ವೇಳೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿ ಪರೀಕ್ಷೆಗೆ ಹಾಜರಾಗದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್ ನಲ್ಲಿ ಈ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಮತ್ತು ಅದನ್ನು ಮೊದಲ ಅಟೆಂಪ್ಟ್ ಎಂದು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಭಾರಿ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳು ಸೆಕೆಂಡ್ ಸೆಮಿಸ್ಟರ್ ನ ತರಗತಿಗಳಿಗೆ ಹಾಜರಾಗಬಹುದು ಮತ್ತು ಈ ಅವಕಾಶವನ್ನು ರೆಗ್ಯುಲರ್ ಆಗಿ ಬಿಇ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗಿದೆ ಎಂದು ದೇಶಪಾಂಡೆಯಲ್ಲಿ ಸುತ್ತೋಲೆಯಲ್ಲಿ ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
VTU clarifies first semester engineering exams to continue. I
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X