ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರಾಜ್ಯದಾದ್ಯಂತ 6 ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 22 ರಿಂದ 6 ರಿಂದ 8ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತಿದ್ದು, ಈಗಾಗಲೇ 9 ರಿಂದ 12ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಆರಂಭವಾಗಿವೆ. ಇದೀಗ 6 ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆಯ ಮೇರೆಗೆ ಶಾಲೆಗೆ ಹಾಜರಾಗಬೇಕಿದೆ.
ಇನ್ನು 1 ರಿಂದ 5ನೇ ತರಗತಿ ವರೆಗೆ ವಿದ್ಯಾಗಮ ಯೋಜನೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ 1 ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
For Quick Alerts
For Daily Alerts