ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20 ನೇ ಸಾಲಿನ ಸಂಗೀತ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20 ನೇ ಸಾಲಿಗೆ ಶಿ‍ಷ್ಯವೇತನದ ಬದಲಾಗಿ ಅಕಾಡೆಮಿ ವತಿಯಿಂದ ಆಸಕ್ತ ಅಭ್ಯರ್ಥಿಗಳಿಗೆ ಸಂಗೀತ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.

ಸಂಗೀತ ನೃತ್ಯ ಅಕಾಡೆಮಿಯು ಸಂಗೀತ ತರಬೇತಿಗೆ ಅರ್ಜಿ ಆಹ್ವಾನಿಸಿದೆ

ಪ್ರತಿಯೊಂದು ಜಿಲ್ಲೆಯಲ್ಲಿ (ಅರ್ಜಿಗಳನ್ನಾಧರಿಸಿ) ಗುರುಗಳ ಮುಖಾಂತರ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಕಲಾಪ್ರಕಾರಗಳಲ್ಲಿ -ಕಲಿಯಲು ಆಸಕ್ತಿಯುಳ್ಳ / ಅಭ್ಯಾಸ ಮಾಡುತ್ತಿರುವ / ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 5 ತಿಂಗಳವರೆಗೆ ತರಬೇತಿಯನ್ನು ನೀಡಲಿದೆ. ಆಸಕ್ತರ ಅಭ್ಯರ್ಥಿಗಳು ಈ ಕೂಡಲೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: 14 ರಿಂದ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆದು ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಸಹ ಕಳುಹಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 20,2019

ಕಚೇರಿಯ ವಿಳಾಸ:

ರಿಜಿಸ್ಟ್ರಾರ್,
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ,
ಕನ್ನಡ ಭವನ,2ನೇ ಮಹಡಿ,
ಜೆ.ಸಿ.ರಸ್ತೆ, ಬೆಂಗಳೂರು 560-002

ಅಭ್ಯರ್ಥಿಗಳು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ

ಕ್ಲಿಕ್ ಮಾಡಿ ಮತ್ತು ತರಬೇತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ

ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka sangeeta nritya academy 2019-20 invited application from aspirants for musical training
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X