ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಬೇಸಿಗೆ ರಜೆಯ ದಿನಾಂಕಗಳನ್ನು ಶಿಕ್ಷಣ ಇಲಾಖೆಯು ಘೋಷಣೆ ಮಾಡಿದೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷ ಏಪ್ರಿಲ್ 9ಕ್ಕೆ ಮುಕ್ತಾಯಗೊಳ್ಳಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಏಪ್ರಿಲ್ 10 ರಿಂದ ಮೇ15ರ ವರೆಗೆ ಬೇಸಿಗೆ ರಜೆ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯು ನಿರ್ಧಾರ ಕೈಗೊಂಡಿದೆ.

ಬೋರ್ಡ್ ಪರೀಕ್ಷೆಗಳು ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯ ಅನುಸಾರ ನಡೆಯಲಿದ್ದು, ವಿದ್ಯಾರ್ಥಿಗಳು ಅದಕ್ಕೆ ಅಗತ್ಯ ತಯಾರಿಯನ್ನು ನಡೆಸತಕ್ಕದ್ದು.
ಕೋವಿಡ್ ಕಾರಣದಿಂದಾಗಿ ಈ ಮೂರೂ ಶೈಕಣಿಕ ಸಾಲಿನಲ್ಲಿ ಭೌತಿಕ ತರಗತಿಗಳು ನಡೆಯದೆ ವಿದ್ಯಾರ್ಥಿಗಳಿಗೆ ಆಗಿರುವ ಕಲಿಕಾ ನಷ್ಟವನ್ನು ಸರಿದೂಗಿಸಲು ಮುಂದಿನ ಶೈಕ್ಷಣಿಕ ವರ್ಷದಲ್ಲಿ 'ಕಲಿಕಾ ಚೇತರಿಕೆ' (ಸೇತುಬಂಧ) ಕಾರ್ಯಕ್ರಮ ಆಯೋಜಿಸಲು ಇಲಾಖೆ ನಿರ್ಧರಿಸಿದೆ. ಅದಾಗ್ಯೂ ಮುಂದಿನ ಶೈಕ್ಷಣಿಕ ವರ್ಷ (2022-23) ಮೇ 16ರಿಂದ ಪ್ರಾರಂಭವಾಗಲಿದ್ದು, ಈ ಕಾರ್ಯಕ್ರಮ ಮೇ 16ರಿಂದ ಆರಂಭವಾಗಲಿದೆ.
ಈ ಭಾರಿ ಏಪ್ರಿಲ್ 9ರಂದು ಶೈಕ್ಷಣಿಕ ವರ್ಷ ಕೊನೆಗೊಳ್ಳಲಿದ್ದು ಪ್ರಾಥಮಿಕ ಶಾಲೆಗಳಲ್ಲಿ ಮಾರ್ಚ್ 24ರಿಂದ ಏಪ್ರಿಲ್ 4ರವರೆಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. ಏ. 9ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. 8-9 ತರಗತಿಗಳಿರುವ ಪ್ರೌಢಶಾಲೆಗಳಲ್ಲಿ ಮಾರ್ಚ್ 21 ರಿಂದ ಮಾರ್ಚ್ 26 ರವರೆಗೆ ವಿಷಯವಾರು ಪರೀಕ್ಷೆ, ಮಾರ್ಚ್ 29ರಂದು ಭಾಗ-2 ( ದೈಹಿಕ ಶಿಕ್ಷಣ, ಇತರ) ಪರೀಕ್ಷೆ ನಡೆಸಿ, ಏಪ್ರಿಲ್ 7ರಂದು ಫಲಿತಾಂಶ ಪ್ರಕಟಿಸಬೇಕು ಎಂದು ಇಲಾಖೆ ಸೂಚಿಸಿದೆ. ಸಾಮಾನ್ಯವಾಗಿ ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭವಾಗಿ ಏಪ್ರಿಲ್ 10ಕ್ಕೆ ಮುಕ್ತಾಯವಾಗುತ್ತದೆ.


Click it and Unblock the Notifications











