
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಹಾಗೆಯೇ ಜುಲೈ ತಿಂಗಳ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಈಗಾಗಲೇ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬೀಳಲಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವ ಕಾರಣದಿಂದಾಗಿ ಯಾವಾಗಿನಿಂದ ಶಾಲೆಗಳನ್ನು ಆರಂಭ ಮಾಡಬೇಕೆಂಬು ಮತ್ತು ಹೇಗೆ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳು, ಡಿಹೆಚ್‌ಓ, ಜಿಲ್ಲಾ ಸಿಇಓ ಹಾಗೂ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂದು ಅಂತಿಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಈಗಾಗಲೇ ತಯಾರಿ ನಡೆಯುತ್ತಿದ್ದು, ಇಂದು ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗೆ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು, ಪರೀಕ್ಷೆಗೆ ಯಾರೆಲ್ಲಾ ಸಹಕಾರ ಅಗತ್ಯವಿದೆ, ಪೋಷಕರು, ಸಿಬ್ಬಂದಿಗಳಿಗೆ ಲಸಿಕೆ ನೀಡುವ ಕುರಿತು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಹತ್ವದ ನಿರ್ಧಾರವನ್ನು ಸಚಿವರು ಘೋಷಿಸಲಿದ್ದಾರೆ.


Click it and Unblock the Notifications











