
ಕರ್ನಾಟಕ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಗಳಿಗೆ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕೊರೋನಾ ಕಾರಣದಿಂದಾಗಿ ಈ ಭಾರಿ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿರುವುದರಿಂದ ಸಮಯವನ್ನು ಸರಿದೂಗಿಸುವ ಸಲುವಾಗಿ ಈ ವರ್ಷ ಶಾಲೆಗಳಲ್ಲಿ ಬೇಸಿಗೆ ರಜಾದಿನಗಳ ಸಂಖ್ಯೆಯನ್ನು ಕಡಿಮೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಈಗಾಗಲೇ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂನ್ 14,2021 ರಿಂದ ಜೂನ್ 25,2021ರ ವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24,2021 ರಿಂದ ಜೂನ್ 10,2021ರ ವರೆಗೆ ನಡೆಯಲಿವೆ.
ಬಲ್ಲ ಮೂಲಗಳ ಪ್ರಕಾರ ಜೂನ್ ನಲ್ಲಿ ಪರೀಕ್ಷೆಗಳು ಮುಗಿಯುತ್ತವೆ, ಮುಂದಿನ ಶೈಕ್ಷಣಿಕ ವರ್ಷವು ಜುಲೈ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುತ್ತದೆಯೇ ಹೊರತು ರಜೆಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


Click it and Unblock the Notifications











