Karnataka 2nd PUC Exam 2021: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸಬೇಕು : ಸಚಿವ ಸುರೇಶ್ ಕುಮಾರ್

ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ದ್ವಿತೀಯ ಪಿಯು ಪರೀಕ್ಷೆ ನಡೆಸಲೇಬೇಕು : ಶಿಕ್ಷಣ ಸಚಿವ

ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲೇಬೇಕು. ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಯನ್ನು ನಡೆಸುವುದು ಒಳಿತು. ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ದ್ವಿತೀಯ ಪಿಯು ಪರೀಕ್ಷೆ ನಡೆಸಲೇಬೇಕು : ಶಿಕ್ಷಣ ಸಚಿವ

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಸೇರಿದಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಉಪಸ್ಥಿತರಿದ್ದ ಸಭೆಯಲ್ಲಿ ಸಚಿವ ಸುರೇಶ್ ಕುಮಾರ್ ಅವರು "ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್​ನಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಸಬಹುದು. ಹಾಗಾಗಿ ವೃತ್ತಿಪರ ಕೋರ್ಸ್ ಗಳಿಗೆ ನೀಟ್/ಜೆಇಇ/ಸಿಇಟಿ/ಐಸಿಎಆರ್/ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ತಿಂಗಳಿನಲ್ಲಿ ಸೂಕ್ತ ದಿನಾಂಕಗಳಂದು ನಡೆಸಬಹುದು" ಎಂದು ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ದ್ವಿತೀಯ ಪಿಯು ಪರೀಕ್ಷೆ ನಡೆಸಲೇಬೇಕು : ಶಿಕ್ಷಣ ಸಚಿವ

ಕೊವಿಡ್ ಹಿನ್ನೆಲೆಯಲ್ಲಿ ಈ ವರ್ಷ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಸರ್ಕಾರವು ಯೋಜನೆ ರೂಪಿಸಿದೆ. ಪರೀಕ್ಷಾ ಪ್ರಕ್ರಿಯೆಯನ್ನು ಸರಳೀಕರಣಗೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ. ಕಳೆದ ವರ್ಷ ಕೋವಿಡ್ ನಡುವೆಯೇ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಇದೆ. ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸಮರ್ಥವಾಗಿ ನಡೆಸುವ ಯೋಜನೆಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
karnataka second puc exam question papers are ready. Need to conduct exams after covid19 situation in control for sake of student's future said by minister s suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X