Second PUC Exam Model Question Papers : 2021-2022ರ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಪದವಿಪೂರ್ವ ಶಿಕ್ಷಣ ಇಲಾಖೆಯು 2021-2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://pue.kar.nic.in//home.asp ಗೆ ಭೇಟಿ ನೀಡುವ ಮೂಲಕ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪಡೆಯಬಹುದು.

2021-22ರ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್

ಈ ಕುರಿತು ರಾಜ್ಯದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳ ಲಿಂಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಮತ್ತು ಮಾದರಿ ಪರೀಕ್ಷಾ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಬಹುದು.

ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ 2022ರ ಮಾದರಿ ಪ್ರಶ್ನೆ ಪತ್ರಿಕೆಗಳನ್ನುಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1 : ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://pue.kar.nic.in//home.asp ಗೆ ಭೇಟಿ ನೀಡಿ
ಸ್ಟೆಪ್ 2 : ಮುಖಪುಟದಲ್ಲಿ ಲಭ್ಯವಿರುವ MODEL QUESTION PAPERS FOR 2021-22 ವಿಭಾಗಕ್ಕೆ ಹೋಗಿ ಮತ್ತು ನಿಮ್ಮ ಆದ್ಯತೆ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 :ಹೊಸ ಪುಟವು ತೆರೆಯುತ್ತದೆ ಮಾದರಿ ಪ್ರಶ್ನೆ ಪತ್ರಿಕೆಗಳು ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ನಂತರ "2021- 22 ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು" ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 4 : PDF ಅನ್ನು ಡೌನ್ಲೋಡ್ ಮಾಡಿ ಮತ್ತು ಅಗತ್ಯವಿದ್ದರೆ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ವೇಳಾಪಟ್ಟಿಯ ಪ್ರಕಾರ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಫೆಬ್ರವರಿ 17,2022 ರಿಂದ ಮಾರ್ಚ್ 25,2022ರ ವರೆಗೆ ನಡೆಸಲು ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16,2022 ರಿಂದ ಮೇ 4,2022ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1ರ ವರೆಗೆ ಅವಕಾಶ ನೀಡಲಾಗಿತ್ತು.

ದ್ವಿತೀಯ ಪಿಯುಸಿ ವಿಷಯವಾರು ತಾತ್ಕಾಲಿಕ ವೇಳಾಪಟ್ಟಿ :

ಏಪ್ರಿಲ್​ 16,2022 ಗಣಿತ
ಏಪ್ರಿಲ್​ 18,2022 ರಾಜ್ಯಶಾಸ್ತ್ರ
ಏಪ್ರಿಲ್ 19,2022 ಮಾಹಿತಿ ತಂತ್ರಜ್ಞಾನ
ಏಪ್ರಿಲ್ 20,2022 ಇತಿಹಾಸ
ಏಪ್ರಿಲ್ 21,2022 ಉರ್ದು ಮತ್ತು ಸಂಸ್ಕೃತ
ಏಪ್ರಿಲ್ 22,2022 ತರ್ಕಶಾಸ್ತ್ರ
ಏಪ್ರಿಲ್ 23,2022 ಕರ್ನಾಟಕ ಸಂಗೀತ
ಏಪ್ರಿಲ್ 25,2022 ಅರ್ಥಶಾಸ್ತ್ರ
ಏಪ್ರಿಲ್ 26,2022 ಹಿಂದಿ
ಏಪ್ರಿಲ್ 28,2022 ಐಚ್ಛಿಕ ಕನ್ನಡ
ಏಪ್ರಿಲ್ 29,2022 ಕನ್ನಡ
ಏಪ್ರಿಲ್ 30,2022 ಸಮಾಜಶಾಸ್ತ್ರ
ಮೇ 2,2022 ಭೋಗೋಳಶಾಸ್ತ್ರ
ಮೇ 4,2022 ಇಂಗ್ಲೀಷ್

More News  

For Quick Alerts
ALLOW NOTIFICATIONS  
For Daily Alerts

English summary
Department of pre university education has released second puc 2021-2022 model question papers. Students can check and prepare for the exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+