Karnataka 2nd PUC Results 2021 : ಪಿಯುಸಿ ವಿದ್ಯಾರ್ಥಿಗಳಿಗೆ 10ನೇ ತರಗತಿ ಮತ್ತು ಪ್ರಥಮ ಪಿಯುಸಿ ಅಂಕಗಳು ವೀಕ್ಷಣೆಗೆ ಲಭ್ಯ

2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಾವು ಗಳಿಸಿರುವ 10ನೇ /ಎಸ್‌ಎಸ್‌ಎಸ್‌ಎಲ್‌ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ವೀಕ್ಷಿಸುವ ಅವಕಾಶವನ್ನು ನೀಡಿದ್ದು, ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಯ ಪೋರ್ಟಲ್(SATS) ನಲ್ಲಿ ನೋಡಬಹುದು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 10ನೇ ತರಗತಿ ಮತ್ತು ಪ್ರಥಮ ಪಿಯುಸಿ ಅಂಕಗಳು ವೀಕ್ಷಣೆಗೆ ಅವಕಾಶ

ವಿದ್ಯಾರ್ಥಿಗಳು ತಮ್ಮ ಎಸ್‌ಎಟಿಎಸ್ ನಂಬರ್ ಅಥವಾ ವಿದ್ಯಾರ್ಥಿ ಸಂಖ್ಯೆ ಅಥವಾ ಎನ್‌ರೋಲ್ಮೆಂಟ್ ಸಂಖ್ಯೆ ಈ ಮೂರರಲ್ಲಿ ಯಾವುದಾದರೂ ಒಂದನ್ನು ನಮೂದಿಸುವ ಮುಖಾಂತರ 10ನೇ ತರಗತಿ/ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ಪ್ರತ್ಯೇಕವಾಗಿ ವೀಕ್ಷಿಸಬಹುದು. ವಿದ್ಯಾರ್ಥಿಗಳಿಗೆ ಸ್ಯಾಟ್ಸ್ ನಂಬರ್ ಅವರ ಎಸ್ ಎಸ್ ಎಲ್ ಸಿ ಅಂಕಪಟ್ಟಿಯಲ್ಲಿ ಅಥವಾ ವರ್ಗಾವಣೆ ಪ್ರಮಾಣಪತ್ರದಲ್ಲಿ ದೊರಕಲಿದೆ ಎಂದು ಇಲಾಖೆ ಹೇಳಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 10ನೇ ತರಗತಿ ಮತ್ತು ಪ್ರಥಮ ಪಿಯುಸಿ ಅಂಕಗಳು ವೀಕ್ಷಣೆಗೆ ಅವಕಾಶ

ಪೋರ್ಟಲ್ ಲಿಂಕ್ https://sts.karnataka.gov.in/SATSPU/ ಜುಲೈ 10ರಂದು ನಿಷ್ಕ್ರಿಯವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಗಳ ಪರಿಶೀಲನಾ ಸಂದರ್ಭದಲ್ಲಿ ಏನಾದರೂ ಅಂಕಗಳಲ್ಲಿ ವ್ಯತ್ಯಾಸ ಕಂಡು ಬಂದರೆ ತಮ್ಮ ಕಾಲೇಜಿನ ಪ್ರಾಚಾರ್ಯರನ್ನು ಜುಲೈ 12,2021ರೊಳಗೆ ಸಂಪರ್ಕಿಸಿ ಸರಿಪರಿಸಿಕೊಳ್ಳಬಹುದು ಮತ್ತು ಕಾಲೇಜು ಪ್ರಾಂಶುಪಾಲರು ದಾಖಲೆ ಮಾಡಿಕೊಂಡ ಅಂಕಗಳು ವಿದ್ಯಾರ್ಥಿಯ ಅಂತಿಮ ಅಂಕವೆಂದು ಪರಿಗಣಿಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka 2nd puc students can verify their sslc and 1st puc marks by july 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X