ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಾರ್ಚ್ 2020ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ 2019-20ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು 2020ರ ಆಗಸ್ಟ್ ಮಾಹೆಯ ಕೊನೆಯ ವಾರದಲ್ಲಿ ಅಥವಾ ಸೆಪ್ಟೆಂಬರ್ ಮಾಹೆಯ ಮೊದಲ ವಾರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಿ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಜುಲೈ 31,2020 ಕೊನೆಯ ದಿನವಾಗಿರುತ್ತದೆ. 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಅತೀ ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಿನಾಂಕ ನಿಗದಿ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
For Daily Alerts