SSLC Exam Model Question Papers : 2021-2022ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, KSEEB ನಿನ್ನೆ ರಾತ್ರಿ 2021-2022ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ sslc.karnataka.gov.in ಗೆ ಭೇಟಿ ನೀಡುವ ಮೂಲಕ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪಡೆಯಬಹುದು.

 
2021-22ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್

ಗುರುವಾರ ರಾತ್ರಿ ರಾಜ್ಯದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳ ಲಿಂಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಮತ್ತು ಮಾದರಿ ಪರೀಕ್ಷಾ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಬಹುದು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2022ರ ಮಾದರಿ ಪ್ರಶ್ನೆ ಪತ್ರಿಕೆಗಳನ್ನುಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1 : ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://sslc.karnataka.gov.in/ ಗೆ ಭೇಟಿ ನೀಡಿ
ಸ್ಟೆಪ್ 2 : ಮುಖಪುಟದಲ್ಲಿ ಡಾಕ್ಯುಮೆಂಟ್ಸ್ ವಿಭಾಗಕ್ಕೆ ಹೋಗಿ ಮತ್ತು ಎಸ್‌ಎಸ್‌ಎಲ್‌ಸಿ ಮೇಲೆ ಕ್ಲಿಕ್ ಮಾಡಿ
ಎಸ್‌ಎಸ್‌ಎಲ್‌ಸಿ ಅಡಿಯಲ್ಲಿ ಡ್ರಾಪ್‌ಡೌನ್ ಮೆನುವಿನಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 :ಹೊಸ ಪುಟವು ತೆರೆಯುತ್ತದೆ ಮಾದರಿ ಪ್ರಶ್ನೆ ಪತ್ರಿಕೆಗಳು ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ನಂತರ "2021- 22 SSLC ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳು" ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 4 : PDF ಅನ್ನು ಡೌನ್ಲೋಡ್ ಮಾಡಿ ಮತ್ತು ಅಗತ್ಯವಿದ್ದರೆ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2022 ರ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆ ಮತ್ತು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನದಂತಹ ಕೋರ್ ವಿಷಯಗಳ ಮಾದರಿ ಪರೀಕ್ಷಾ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ. ಕರ್ನಾಟಕ SSLC ಪರೀಕ್ಷೆ 2022ರ ಪ್ರಮುಖ ವಿಷಯಗಳ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿದೆ.

 

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 28 ರಿಂದ ಏಪ್ರಿಲ್ 11,2022ರ ವರೆಗೆ ನಡೆಯಲಿದ್ದು, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1:45ರ ತನಕ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯದ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ಭಾಷಾ ಪರೀಕ್ಷೆಯು 100 ಅಂಕಗಳಿಗೆ ಹಾಗೂ ಕೋರ್ ಸಬ್ಜೆಕ್ಟ್ 80 ಅಂಕಗಳಿಗೆ ಇರಲಿದೆ.‌

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ 2022 ವೇಳಾಪಟ್ಟಿ :

* ಮಾರ್ಚ್ 28,2022ರ ಸೋಮವಾರ; ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಶ್, ಇಂಗ್ಲೀಶ್ (ಎನ್‌ಸಿಇಆರ್‌ಟಿ), ಸಂಸ್ಕೃತ.

* ಮಾರ್ಚ್ 29,2022ರ ಮಂಗಳವಾರ ಯಾವುದೇ ಪರೀಕ್ಷೆ ಇಲ್ಲ.

* ಮಾರ್ಚ್ 30,2022ರ ಬುಧವಾರ; ದ್ವಿತೀಯ ಭಾಷೆ ಇಂಗ್ಲೀಶ್, ಕನ್ನಡ

* ಮಾರ್ಚ್ 31,2022ರ ಯಾವುದೇ ಪರೀಕ್ಷೆ ಇರುವುದಿಲ್ಲ.

* ಏಪ್ರಿಲ್ 1,2022ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಇಂಜಿನಿಯರಿಂಗ್ -2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್, ಎಲಿಮೆಂಟ್ಸ್‌ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

* ಏಪ್ರಿಲ್ 4,22022ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ ನಡೆಯಲಿದೆ.

* ಏಪ್ರಿಲ್ 6,2022ರ ಬುಧವಾರ ಸಮಾಜ ವಿಜ್ಞಾನ ಪರೀಕ್ಷೆ ಇದೆ.

* ಏಪ್ರಿಲ್ 8,2022 ಶುಕ್ರವಾರದಂದು ಹಿಂದಿ, ಕನ್ನಡ, ಇಂಗ್ಲೀಶ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ ನೆಸ್.

* ಏಪ್ರಿಲ್ 11,2022 ಸೋಮವಾರ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ

For Quick Alerts
ALLOW NOTIFICATIONS  
For Daily Alerts

English summary
KSEEB has released sslc 2021-2022 model question papers. Students can check and prepare for the exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X