ಕೊರೋನಾ ಕಾರಣದಿಂದಾಗಿ ಕೆಲವು ತಿಂಗಳಿನಿಂದ ಶಾಲೆಗಳನ್ನು ಮುಚ್ಚಲಾಗಿತ್ತು, ತದನಂತರ ಜನವರಿ ೧ ರಿಂದ ಶಾಲೆ ಮತ್ತು ಕಾಲೇಜುಗಳು ಪುನರಾರಂಭಗೊಂಡಿವೆ. ಇದರ ಬೆನ್ನಲ್ಲೆ ಇಂದು ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಕುರಿತು ಮಾಹಿತಿಯನ್ನು ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ ತಿಂಗಳಿನಲ್ಲಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂನ್ ತಿಂಗಳಿನಲ್ಲಿ ನಡೆಯಲಿವೆ ಎಂದು ಶಿಕ್ಷಣ ಸಚಿವರ ಸುರೇಶ್ ಕುಮಾರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು "ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ" ಎಂದು ಬರೆದಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯಸಿ ಪರೀಕ್ಷೆಗಳ ದಿನಾಂಕ ಮತ್ತು ಪರೀಕ್ಷಾ ದಿನಾಂಕಗಳ ಕುರಿತಾದ ಮತ್ತಷ್ಟು ಮಾಹಿತಿಗಳು ಅತೀ ಶೀಘ್ರದಲ್ಲಿ ಬಿಡುಗಡೆಯಾಗಲಿವೆ.
For Quick Alerts
For Daily Alerts
English summary
karnataka sslc exams will conduct in june and puc exams conduct in may said by minister suresh kumar.


Click it and Unblock the Notifications











