Karnataka SSLC Board Exam 2022 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದಿನಿಂದ ಆರಂಭ ; ಮಾರ್ಗಸೂಚಿ ಇಲ್ಲಿದೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಗಳು ರಾಜ್ಯಾದ್ಯಂತ ಇಂದಿನಿಂದ ಪ್ರಾರಂಭವಾಗಲಿದೆ. ಮಾರ್ಚ್ 28 ರಿಂದ ಏಪ್ರಿಲ್ 11,2022ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1:45ರ ತನಕ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಆರಂಭ

ಪ್ರತಿ ವಿಷಯದ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ಭಾಷಾ ಪರೀಕ್ಷೆಯು 100 ಅಂಕಗಳಿಗೆ ಹಾಗೂ ಕೋರ್ ಸಬ್ಜೆಕ್ಟ್ 80 ಅಂಕಗಳಿಗೆ ಇರಲಿದೆ.‌ ಪರೀಕ್ಷೆಗೆ ಸುಮಾರು 8.73 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯ ಮೊದಲ ದಿನದಂದು ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷಾ ಪತ್ರಿಕೆಗಳಿಗೆ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಪರೀಕ್ಷಾರ್ಥಿಗಳಿಗೆ ಮಾರ್ಗಸೂಚಿ :

* ಪರೀಕ್ಷೆಗೆ ಹಾಜರಾಗುವಾಗ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಅದಲ್ಲದೇ ಸಮವಸ್ತ್ರದೊಂದಿಗೆ ಯಾವುದೇ ಧಾರ್ಮಿಕ ಉಡುಪುಗಳನ್ನು ನಿಷೇಧಿಸಲಾಗಿದೆ ಹಾಗಾಗಿ ಹಿಜಾಬ್ ಧರಿಸಲು ಅನುಮತಿಯಿರುವುದಿಲ್ಲ.

* ಕರ್ನಾಟಕ ಪರೀಕ್ಷಾ ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ತಮ್ಮೊಂದಿಗೆ ಕಡ್ಡಾಯವಾಗಿ ಕೊಂಡೊಯ್ಯಬೇಕಾಗುತ್ತದೆ. ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳು ಪ್ರಾರಂಭವಾಗುವ ಮೊದಲು ಪರೀಕ್ಷಾ ಕೇಂದ್ರಗಳನ್ನು ತಲುಪುವುದು ಒಳಿತು.

* ಪರಿಕ್ಷಾರ್ಥಿಗಳು ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಆರೋಗ್ಯ ತಪಾಸಣಾ ಕೌಂಟರ್‌ಗೆ ಹೋಗಬೇಕು. ಥರ್ಮಲ್ ಸ್ಕ್ಯಾನರ್ ನಿಂದ ಪರೀಕ್ಷೆಗೆ ಒಳಪಡಬೇಕು.

* ಪರೀಕ್ಷಾ ಕೇಂದ್ರದ ಹೊರಗೆ ವಿದ್ಯಾರ್ಥಿಗಳ ಗುಂಪು ಕೂಡಬಾರದು.

* ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದ ಬಳಿ ಆರೋಗ್ಯ ತಪಾಸಣಾ ಕೇಂದ್ರವನ್ನು ಸ್ಥಾಪಿಸಬೇಕು. ಬೆಳಗ್ಗೆ 8.30 ರಿಂದಲೇ ಆರೋಗ್ಯ ತಪಾಸಣಾ ಕೌಂಟರ್ ಕಾರ್ಯ ನಿರ್ವಹಿಸಬೇಕು.

* ನೆಗಡಿ, ಜ್ವರ, ಕೆಮ್ಮುನಿಂದ ಬಳಲುತ್ತಿರುವ ಮಕ್ಕಳನ್ನು ಪಲ್ಸ್ ಆಕ್ಸಿಮೀಟರ್ ನಿಂದ ಪರೀಕ್ಷೆಗೆ ಒಳಪಡಿಸಬೇಕು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ :

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿರುತ್ತದೆ. ರಾಜ್ಯದ ಹಲವೆಡೆ ದೂರದ ಹಳ್ಳಿಗಳ ಮಕ್ಕಳು ಓದಲು ಮತ್ತು ಪರೀಕ್ಷೆ ಬರೆಯಲು ಪಟ್ಟಣಕ್ಕೆ ಬರುತ್ತಾರೆ. ಇದಕ್ಕಾಗಿ ಅವರು ಕಿಲೋಮೀಟರ್‌ಗಟ್ಟಲೆ ನಡೆದುಕೊಂಡು ಹೋಗಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಅವರಿಗೆ ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಈ ಆದೇಶದಿಂದ ಹಲವು ವಿದ್ಯಾರ್ಥಿಗಳು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

Free Bus Travel For SSLC Students : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣFree Bus Travel For SSLC Students : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ 2022 ವೇಳಾಪಟ್ಟಿ :

* ಮಾರ್ಚ್ 28,2022ರ ಸೋಮವಾರ; ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಶ್, ಇಂಗ್ಲೀಶ್ (ಎನ್‌ಸಿಇಆರ್‌ಟಿ), ಸಂಸ್ಕೃತ.

* ಮಾರ್ಚ್ 29,2022ರ ಮಂಗಳವಾರ ಯಾವುದೇ ಪರೀಕ್ಷೆ ಇಲ್ಲ.

* ಮಾರ್ಚ್ 30,2022ರ ಬುಧವಾರ; ದ್ವಿತೀಯ ಭಾಷೆ ಇಂಗ್ಲೀಶ್, ಕನ್ನಡ

* ಮಾರ್ಚ್ 31,2022ರ ಯಾವುದೇ ಪರೀಕ್ಷೆ ಇರುವುದಿಲ್ಲ.

* ಏಪ್ರಿಲ್ 1,2022ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ & ಎಲೆಕ್ಟ್ರಿಕಲ್ ಇಂಜಿನಿಯರಿಂಗ್ -2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್, ಎಲಿಮೆಂಟ್ಸ್‌ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

* ಏಪ್ರಿಲ್ 4,22022ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ ನಡೆಯಲಿದೆ.

* ಏಪ್ರಿಲ್ 6,2022ರ ಬುಧವಾರ ಸಮಾಜ ವಿಜ್ಞಾನ ಪರೀಕ್ಷೆ ಇದೆ.

* ಏಪ್ರಿಲ್ 8,2022 ಶುಕ್ರವಾರದಂದು ಹಿಂದಿ, ಕನ್ನಡ, ಇಂಗ್ಲೀಶ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ ನೆಸ್.

* ಏಪ್ರಿಲ್ 11,2022 ಸೋಮವಾರ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ

For Quick Alerts
ALLOW NOTIFICATIONS  
For Daily Alerts

English summary
Karnataka sslc board exam begins from today, Here is the guidelines, complete time table and information about free bus travel.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X