Karnataka SSLC Exam 2021 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ವೆಬ್‌ಸೈಟ್ ನಲ್ಲಿ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ರಾಜ್ಯದಲ್ಲಿ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜುಲೈ 3ನೇ ವಾರದಲ್ಲಿ ನಡೆಯಲಿದ್ದು, ಅದಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ.

ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://sslc.karnataka.gov.in/ ಗೆ ಭೇಟಿ ನೀಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಬಹು ಆಯ್ಕೆ ಮಾದರಿಯ ಮೊದಲ ಪ್ರಶ್ನೆ ಪತ್ರಿಕೆಯನ್ನು ವೀಕ್ಷಿಸಬಹುದು.

ಈ ಭಾರಿ ಪರೀಕ್ಷೆಯಲ್ಲಿ ಪ್ರತೀ ವಿಷಯಕ್ಕೆ ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಒಟ್ಟು 3 ಗಂಟೆಗಳ ಅವಧಿಯ ಪರೀಕ್ಷೆಯಾಗಿರುತ್ತದೆ. ವಿದ್ಯಾರ್ಥಿಗಳು OMR ಶೀಟ್ನಲ್ಲಿ ಉತ್ತರಗಳನ್ನು ನಮೂದಿಸಬೇಕು. OMR ಶೀಟ್ ಮಾದರಿಯನ್ನೂ ಸಹ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಇನ್ನೆರಡು ದಿನದಲ್ಲಿ ಮಾತೃ ಭಾಷೆ ಸೇರಿ 3 ವಿಷಯಗಳ ಪ್ರಶ್ನೆಪತ್ರಿಕೆ ಪ್ರಕಟವಾಗಲಿದೆ. ಪ್ರಶ್ನೆ ಪತ್ರಿಕೆಯನ್ನು ವೆಬ್ ಸೈಟ್ನಲ್ಲಿ ಡೌನ್ ಲೋಡ್ ಮಾಡಿ ಅಭ್ಯಾಸ ಮಾಡಲು ಸೂಚಿಸಲಾಗಿದೆ. ಶಿಕ್ಷಕರೂ ಈ ಕುರಿತು ಕಾರ್ಯ ಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka sslc exam model question paper published in board website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X