ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ನಾಳೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬುಧವಾರ ಸಾಮಾನ್ಯ ಪ್ರವೇಶ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಇದರ ಹಿಂದೆಯೇ ಈಗ ಪ್ರೌಢ ಶಿಕ್ಷಣ ಮಂಡಳಿ 10 ನೇ ತರಗತಿ/ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್ ಗೂ ಮುಂಚೆ ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಕೊರೋನಾ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಮೇ.16 ರಂದು ಅಂದರೆ ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್ ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ಸೆಕೆಂಡರಿ ಎಜುಕೇಷನ್ ಎಕ್ಸಾಮಿನೇಷನ್ ಬೋರ್ಡ್ ಯಾವುದೇ ನಿಯಮಗಳನ್ನು ಹೇರಿ ಪರೀಕ್ಷೆ ನಡೆಸಿದರೂ ಆ ನಿಯಮಗಳನ್ವಯ ಪರೀಕ್ಷೆ ನಡೆಸಲಾಗುತ್ತದೆ. ಅದಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಸಹಕರಿಸಬೇಕಾಗುತ್ತದೆ ಎಂದು ಸಚಿವರು ಮನವಿ ಮಾಡಿದ್ದಾರೆ.


Click it and Unblock the Notifications











