Karnataka SSLC Exam 2021: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಶಿಕ್ಷಕರು, ಸಿಬ್ಬಂದಿಗೆ ಕೋವಿಡ್ ಲಸಿಕೆ ಘೋಷಿಸಿದ ಸಚಿವ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಶಿಕ್ಷಕ, ಸಿಬ್ಬಂದಿಗೆ ಕೋವಿಡ್ ಲಸಿಕೆ : ಸುರೇಶ್ ಕುಮಾರ್ ಘೋಷಣೆ

ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿರುವ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಘೋಷಿಸಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ 6000 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ಶಿಕ್ಷಕ ಮತ್ತು ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. ಈ ಕುರಿತು ಜಿಲ್ಲಾ ಉಪನಿರ್ದೇಶಕರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಲಸಿಕೆ ನೀಡಲು ಸೂಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಪಿಯು ಉಪನ್ಯಾಸಕರ ಕೋರಿಯ ಮೇರೆಗೆ ಪ್ರಥಮ ಪಿಯುಸಿ ಮೌಲ್ಯಾಂಕನ ಅವಧಿಯನ್ನು ವಿಸ್ತರಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಲಾಕ್‌ಡೌನ್‌ ಅಂತ್ಯಗೊಳ್ಳುವ ವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka sslc exam 2021 will be held in third week of july. All teachers and staffs who involving in exam will be vaccinated said by suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X