ರಾಜ್ಯದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚುತ್ತಲೇ ಇದೆ ಇದರಿಂದಾಗಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತವೆಯೋ ಅಥವಾ ಇಲ್ಲವೋ ಎಂಬ ಗೊಂದಲಕ್ಕೆ ಇದೀಗ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪರೀಕ್ಷೆ ನಡೆಸುವ ಕುರಿತು ಗೊಂದಲ ಮೂಡಿದೆ ಹೀಗಾಗಿ ಅನೇಕ ಅಭಿಪ್ರಾಯ ಸಂಗ್ರಹಿಸಿ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 8.75 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಜುಲೈ ಮೂರನೇ ವಾರದಲ್ಲಿ ನಡೆಸುವುದಕ್ಕೆ ಸರ್ಕಾರವು ತೀರ್ಮಾನಿಸಿರುವುದಾಗಿ ಹೇಳಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನವನ್ನು ಕ್ರೂಡೀಕರಿಸಿ ಒಂದು ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ. ಸರಳ ಹಾಗೂ ಸುಲಭ ಭಾಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುವ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗಿರುತ್ತದೆ. ಈ ಪ್ರಶ್ನೆ ಪತ್ರಿಕೆ ಹಿಂದೆ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಅದರ ಬದಲಿಗೆ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ಯಾವ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದನ್ನು ನಿರ್ಧರಿಸುವುದಕ್ಕೆ ಸಹಯವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.


Click it and Unblock the Notifications











