karnataka Sslc Exam 2021 : ಮೊದಲ ದಿನದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿ

ಇಂದು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿ : ಸುರೇಶ್ ಕುಮಾರ್

ರಾಜ್ಯದಲ್ಲಿ ಮೊದಲ ದಿನದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ ಸುರಕ್ಷಿತ ವಾತಾವರಣದಲ್ಲಿ ಹಾಗೂ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ .

 

ಪರೀಕ್ಷೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿ ಎರಡು ದಿನಗಳ ಕಾಲ ಮಾತ್ರ ಪರೀಕ್ಷೆ ನಡೆಯಲಿದ್ದು, ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಇಂದು ಒಟ್ಟು 3 ವಿಷಯಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಗಣಿತ ವಿಷಯಕ್ಕೆ 8,52,191 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,49,199 ವಿದ್ಯಾರ್ಥಿಗಳು ಹಾಜರಾಗಿ, 2992 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.64 ಹಾಜರಾತಿ ಇದೆ. ಕಳೆದ ವರ್ಷ ಇದು ಶೇ 98.30 ಇತ್ತು. ವಿಜ್ಞಾನ ವಿಷಯಕ್ಕೆ 8,43,976 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,40,841 ವಿದ್ಯಾರ್ಥಿಗಳು ಹಾಜರಾಗಿ 3127 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.62 ಹಾಜರಾತಿ ಇದೆ. ಕಳೆದ ವರ್ಷ ಇದು ಶೇ 98.36 ಇತ್ತು. ಸಮಾಜ ವಿಜ್ಞಾನ ವಿಷಯಕ್ಕೆ 8,24,689 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,21,823 ವಿದ್ಯಾರ್ಥಿಗಳು ಹಾಜರಾಗಿ 2867 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.65 ಹಾಜರಾತಿ ಇದೆ. ಕಳೆದ ವರ್ಷ ಇದು ಶೇ 98.43 ಇತ್ತು ಎಂದು ಮಾಹಿತಿ ನೀಡಿದರು.

ಇಂದು ಕೊರೊನಾ ಸೋಂಕಿತ 58 ವಿದ್ಯಾರ್ಥಿಗಳು, ಅನಾರೋಗ್ಯದ ಕಾರಣ ವಿಶೇಷ ಕೊಠಡಿಯಲ್ಲಿ 111 ವಿದ್ಯಾರ್ಥಿಗಳು, 10693 ವಲಸೆ ವಿದ್ಯಾರ್ಥಿಗಳು ಹಾಗೂ ವಸತಿನಿಲಯಗಳಿಂದ 2870 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka sslc exam 2021 on july 19 and 22. Today exam was successfully conducted.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X