Karnataka SSLC Exam 2021 : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಮಾರ್ಗಸೂಚಿ ರಿಲೀಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ಕಂಪ್ಲೀಟ್ ಡೀಟೇಲ್ಸ್

ರಾಜ್ಯದಲ್ಲಿ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜುಲೈ 3ನೇ ವಾರದಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಶಿಕ್ಷಕರು ಇದರ ಪ್ರಕಾರ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿರುವ ಅಂಶಗಳು :

* ಈ ಭಾರಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲಿರುವ ಶಿಕ್ಷಕರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಜಿಲ್ಲಾಡಳಿತದ ಸಹಾಯದೊಂದಿಗೆ ಕೊರೊನಾ ಲಸಿಕೆ ಕಡ್ಡಾಯವಾಗಿ ಪಡೆಯಬೇಕು. ಕನಿಷ್ಟ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು ಮತ್ತು ಅದರ ಪ್ರಮಾಣ ಪತ್ರ ಹೊಂದಿರಬೇಕು.

* ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷೆಯ ಮೊದಲು ಪರಿಶೀಲಿಸುವುದು ಮತ್ತು ಅನುಷ್ಠಾನವನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಬೇಕು.

* ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ತಾವು ಇರುವಲ್ಲಿಯೇ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

* ಪ್ರತಿದಿನವೂ ಪರೀಕ್ಷೆ ಆರಂಭವಾಗುವುದಕ್ಕೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿದ ಬಳಿಕ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜೇಷನ್ ಮಾಡುಬೇಕಿದೆ.

* ವಿದ್ಯಾರ್ಥಿಯು ಪರೀಕ್ಷಾ ಕೇಂದ್ರದಲ್ಲಿ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಗೆ ಪ್ರವೇಶಿಸುವಂತೆ ನಿರ್ದೇಶಿಸುವುದು.

* ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ವಿದ್ಯಾರ್ಥಿಗಳ ನಡುವೆ ದೈಹಿಕ ಅಂತರ ಕಾಪಾಡಿಕೊಳ್ಳುವುದು.

* ಪರೀಕ್ಷಾ ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಕುಳಿತಿರಬೇಕು ಮತ್ತು ಪ್ರತಿ ಮೇಜಿನಲ್ಲೂ ಒಬ್ಬ ವಿದ್ಯಾರ್ಥಿ ಮಾತ್ರ ಕುಳಿತಿರಬೇಕು.

* ವಿದ್ಯಾರ್ಥಿಯು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಬೇಕು.

* ವಿದ್ಯಾರ್ಥಿಯ ಕುಟುಂಬದಲ್ಲಿ ಯಾರಾದರೂ ಸೋಂಕಿಗೆ ಒಳಗಾಗಿದ್ದರೆ ಅಂತಹ ಅಭ್ಯರ್ಥಿಯು ಪ್ರತ್ಯೇಕವಾಗಿರುತ್ತಾನೆ. ಒಂದು ವೇಳೆ ಆ ವಿದ್ಯಾರ್ಥಿಯು ಆರೋಗ್ಯವಂತನಾಗಿರುವುದು ಕಂಡುಬಂದರೆ ಆ ವಿದ್ಯಾರ್ಥಿಯನ್ನು ಪರೀಕ್ಷಿಸಿದ ನಂತರ ಹತ್ತಿರದ ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆಯನ್ನು ಬರೆಯಲು ಅನುಮತಿ ನೀಡಲಾಗುತ್ತದೆ.

* ಕೋವಿಡ್-19 ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬರೆಯಲು ಕೋವಿಡ್ ಆರೈಕೆ ಕೇಂದ್ರವೂ ಇರುತ್ತದೆ.

* ಆರೋಗ್ಯ ಕೌಂಟರ್‌ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಪಲ್ಸ್ಆಕ್ಸಿಮೀಟರ್, ಥರ್ಮಲ್ ಸ್ಕ್ಯಾನಿಂಗ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಶಾಲಾ ಆವರಣದಲ್ಲಿ ಇಟ್ಟುಕೊಳ್ಳಲು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್‌ನಲ್ಲೇ ಮಾಸ್ಕ್ ನೀಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪರೀಕ್ಷೆಗೆ ಸಂಬಂಧಿಸಿದಂತೆ ಜೂ.28 ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‌ಪಿಗಳು, ಡಿಎಚ್‌ಒ, ಖಜಾನಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ಈ ಸಭೆಯಲ್ಲಿ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರು ಭಾಗಿಯಾಗುವರು ಎಂದು ಸಚಿವರು ಹೇಳಿದ್ದಾರೆ.

ಪರೀಕ್ಷೆಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದರ ಮೂಲಕ ಪರೀಕ್ಷೆಯ ಯಶಸ್ಸಿಗೆ ಉತ್ತಮ ರೀತಿಯಲ್ಲಿ ಯೋಜನೆಯನ್ನು ಹಾಕಿಕೊಳ್ಳಲಾಗುತ್ತಿದೆ ಮತ್ತು ಅದನ್ನು ಕಾರ್ಯರೂಪಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka sslc exam 2021 is on july 3rd week, education minister suresh kumar released SOP for conducting the exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+