
ರಾಜ್ಯದಾದ್ಯಂತ ಕೊರೋನಾ ಸಮಸ್ಯೆ ಹೆಚ್ಚಾದ ಬೆನ್ನಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗುತ್ತಾ ? ಎಂಬ ಮಾತು ಕೇಳಿಬರುತ್ತಿತ್ತು. ಈ ಕುರಿತು ಸರ್ಕಾರ ಇದೀಗ ಬ್ರೇಕಿಂಗ್ ಸುದ್ದಿ ನೀಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆ !
ರಾಜ್ಯದಾದ್ಯಂತ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 21 ರಿಂದ ರಾಜ್ಯಾದ್ಯಂತ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆ !
ಕೊರೋನಾ ಎರಡನೇ ಅಲೆಯ ಪರಿಣಾಮದಿಂದಾಗಿ ಸೋಂಕು ಹೆಚ್ಚುತ್ತಿರುವ ಕಾರಣ ಶಿಕ್ಷಣ ಇಲಾಖೆ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡುವುದಾಗಿ ಪ್ರಕಟಣೆ ಹೊರಡಿಸಿತ್ತು. ನಿನ್ನೆಯಷ್ಟೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗಳನ್ನು ಮುಂದೂಡಿದ್ದು, ಪರಿಷ್ಕೃತ ಹೊಸ ದಿನಾಂಕಗಳನ್ನು ಪ್ರಕಟ ಮಾಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆ !
ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಜೂನ್ 21 ರಿಂದ ಜುಲೈ 5,2021ರ ವರೆಗೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆ !
ಕೊರೋನಾ ಹೆಚ್ಚಳದಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕ ಮನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷೆ ಬಗ್ಗೆ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


Click it and Unblock the Notifications











