ರಾಜ್ಯದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವಿನಾಯಿತಿ ನೀಡಿದೆ. ಶೇ.75 ರಷ್ಟು ಹಾಜರಾತಿ ಇಲ್ಲದಿದ್ದರೂ ಕೂಡ ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆಯನ್ನು ಬರೆಯುವ ಅವಕಾಶ ನೀಡಲಾಗುತ್ತಿದೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ತಡವಾಗಿ ಪ್ರಾರಂಭಿಸಲಾಗಿದ್ದು, ಶಾಲೆಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳಿಗೆ ಕೆಲ ವಿನಾಯಿತಿಯನ್ನು ನೀಡಿದೆ.
ಪ್ರತಿ ವರ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿತ್ತು. ಆದರೆ ಈ ಭಾರಿ ಎದುರಾದ ಸಂಕಷ್ಟದ ಪರಿಸ್ಥಿತಿಯಿಂದಾಗಿ ಹಾಜರಾತಿ ಕಡ್ಡಾಯವನ್ನು ರದ್ದು ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಲಾಗಿದೆ.
For Daily Alerts