ಕರ್ನಾಟಕ ರಾಜ್ಯದ 2021ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಡಿಸೆಂಬರ್ ಅಂತ್ಯಕ್ಕೆ ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಶಾಲಾ ತರಗತಿಗಳನ್ನು ಜನವರಿ ಇಂದ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಡಿಸೆಂಬರ್ ಅಂತ್ಯಕ್ಕೆ ಪ್ರಕಟವಾಗಲಿದೆ.
ಪ್ರಸಕ್ತ ಸಾಲಿನಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ತಡವಾಗಿದ್ದು, ಪಠ್ಯ ಕಡಿತ ಮಾಡುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿಗೆ ಶೇ.30ರಷ್ಟು ಪಠ್ಯಕ್ರಮಗಳನ್ನು ಕಡಿತ ಮಾಡಿದೆ.
For Quick Alerts
For Daily Alerts