ಕೊರೋನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಆಕಾಶವಾಣಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ರಾಜ್ಯದ ಯಾವುದೇ ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಪರೀಕ್ಷೆ ನಡೆಯುವ ಸಮೀಪದ ದಿನಗಳ ಆಸುಪಾಸಿನಲ್ಲಿ ಯಾವುದೇ ವಲಯಗಳು ಕಂಟೈನ್ಮೆಂಟ್ ವಲಯವೆಂದು ಘೋಷಿತವಾದರೆ ಅಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ. ಪೂರಕ ಪರೀಕ್ಷೆಯಲ್ಲಿ ಪುನರಾವರ್ತಿತ ಅಭ್ಯರ್ಥಿ ಎಂದು ಪರಿಗಣಿಸದೇ, ಹೊಸ ಪರೀಕ್ಷಾ ಅಭ್ಯರ್ಥಿ ಎಂದೇ ಪರಿಗಣಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈಗಾಗಲೆ ಎಸ್‌ಎಸ್‌ಎಲ್‌ಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಪರೀಕ್ಷೆಗೆ ಸಿದ್ದತೆಗಳು ನಡೆಯುತ್ತಿವೆ. ಹಾಗೂ ಪರೀಕ್ಷೆಗೆ ಎಲ್ಲಾ ರೀತಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ಅವರು ಮಾತನಾಡಿದ್ದಾರೆ.


Click it and Unblock the Notifications











