Karnataka SSLC Result 2021 : ಎಸ್‌ಎಸ್‌ಎಲ್‌ಸಿ ಫಲಿತಾಂಶ ಆ.10ರೊಳಗೆ ಪ್ರಕಟ ಸಾಧ್ಯತೆ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (KSEEB) ಆಗಸ್ಟ್ 10 ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಚೆಕ್ ಮಾಡಿಕೊಳ್ಳಬಹುದು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಆ.10ರೊಳಗೆ ಪ್ರಕಟ ಸಾಧ್ಯತೆ

ಕರ್ನಾಟಕವು ಇತರೆ ರಾಜ್ಯಗಳಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿಲ್ಲ ಎಂಬುದನ್ನು ನಾವು ಗಮನಿಸಬೇಕು. ಬದಲಾಗಿ ಮಂಡಳಿಯು ಹೊಸ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಿತು. ಎಸ್‌ಎಸ್‌ಎಲ್‌ಸಿ ಆಫ್‌ಲೈನ್ ಪರೀಕ್ಷೆಯನ್ನು 2 ದಿನಗಳಲ್ಲಿ ಕಾಲ ನಡೆಸಲಾಯಿತು. ಜುಲೈ 19 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕೋರ್ ವಿಷಯಗಳನ್ನು ಮತ್ತು ಭಾಷಾ ಪರೀಕ್ಷೆಗಳನ್ನು ಜುಲೈ 23 ರಂದು ನಡೆಸಲಾಯಿತು.

ಮೂಲಗಳ ಪ್ರಕಾರ ಒಟ್ಟು 8,19,694 ವಿದ್ಯಾರ್ಥಿಗಳಲ್ಲಿ 99.62%ರಷ್ಟು ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ಮತ್ತು 99.60%ರಷ್ಟು ವಿದ್ಯಾರ್ಥಿಗಳು ದ್ವಿತೀಯ ಭಾಷೆಯ ಪರೀಕ್ಷೆಗೆ ಹಾಜರಾಗಿದ್ದಾರೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2021ರಲ್ಲಿ ಒಟ್ಟಾರೆ 99.60 ರಷ್ಟು ಹಾಜರಾತಿ ಕಂಡುಬಂದಿದೆ.

ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಮಾಣಪತ್ರವನ್ನು ಪಡೆಯಲು ಪರೀಕ್ಷೆಯಲ್ಲಿ ಕನಿಷ್ಟ ಶೇಕಡಾ 35 ರಷ್ಟು ಅಥವಾ 600ಕ್ಕೆ 210 ಅಂಕಗಳನ್ನು ಪಡೆಯಬೇಕು. ಜೊತೆಗೆ ಭಾಷೆ ಪತ್ರಿಕೆಗಳಲ್ಲಿ ಕನಿಷ್ಠ 70 ಅಂಕಗಳನ್ನು ಗಳಿಸಬೇಕಾಗುತ್ತದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಕಳೆದ ವರ್ಷ ಆಗಸ್ಟ್ 10 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯ ಮೂಲಕ ಘೋಷಿಸಲಾಯಿತು. 2020 ರಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಿದ್ದರು ಅದರಲ್ಲಿ 71.80 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾ 77.74%ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು, ಬಾಲಕರು ಶೇಕಡಾ 66.41 ರಷ್ಟು ಫಲಿತಾಂಶದೊಂದಿಗೆ ಪಾಸ್‌ ಆಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್
https://sslc.karnataka.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಇತರೆ ಮಾಹಿತಿ ನಮೂದಿಸಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
Karnataka sslc exam 2021 result likely to be declared by august 10. How to download results check here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X