ಪ್ರಸಕ್ತ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಂದು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು "ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಫಲಿತಾಂಶ ಪ್ರಕಟಿಸಲು ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ" ಎಂದು ಹೇಳಿದ್ದಾರೆ.

ಈ ಭಾರಿ ವಿಶೇಷ ರೀತಿಯಲ್ಲಿ ಪರೀಕ್ಷೆ :
ಕರ್ನಾಟಕವು ಇತರೆ ರಾಜ್ಯಗಳಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿಲ್ಲ ಬದಲಾಗಿ ಮಂಡಳಿಯು ಹೊಸ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಿತು. ಎಸ್‌ಎಸ್‌ಎಲ್‌ಸಿ ಆಫ್‌ಲೈನ್ ಪರೀಕ್ಷೆಯನ್ನು 2 ದಿನಗಳಲ್ಲಿ ಕಾಲ ನಡೆಸಲಾಯಿತು. ಜುಲೈ 19 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕೋರ್ ವಿಷಯಗಳನ್ನು ಮತ್ತು ಭಾಷಾ ಪರೀಕ್ಷೆಗಳನ್ನು ಜುಲೈ 23 ರಂದು ನಡೆಸಲಾಯಿತು.
ಪರೀಕ್ಷೆಗೆ ಹಾಜರಾತಿ :
ಮೂಲಗಳ ಪ್ರಕಾರ ಒಟ್ಟು 8,19,694 ವಿದ್ಯಾರ್ಥಿಗಳಲ್ಲಿ 99.62%ರಷ್ಟು ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ಮತ್ತು 99.60%ರಷ್ಟು ವಿದ್ಯಾರ್ಥಿಗಳು ದ್ವಿತೀಯ ಭಾಷೆಯ ಪರೀಕ್ಷೆಗೆ ಹಾಜರಾಗಿದ್ದಾರೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2021ರಲ್ಲಿ ಒಟ್ಟಾರೆ 99.60 ರಷ್ಟು ಹಾಜರಾತಿ ಕಂಡುಬಂದಿದೆ.
ಉತ್ತೀರ್ಣರಾಗಲು ಬೇಕಿರುವ ಅಂಕಗಳು:
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಮಾಣಪತ್ರವನ್ನು ಪಡೆಯಲು ಪರೀಕ್ಷೆಯಲ್ಲಿ ಕನಿಷ್ಟ ಶೇಕಡಾ 35 ರಷ್ಟು ಅಥವಾ 600ಕ್ಕೆ 210 ಅಂಕಗಳನ್ನು ಪಡೆಯಬೇಕು. ಜೊತೆಗೆ ಭಾಷೆ ಪತ್ರಿಕೆಗಳಲ್ಲಿ ಕನಿಷ್ಠ 70 ಅಂಕಗಳನ್ನು ಗಳಿಸಬೇಕಾಗುತ್ತದೆ.
ಈ ಭಾರಿ ಮರುಮೌಲ್ಯಮಾಪನಕ್ಕೆ ಅವಕಾಶ ಇದೆಯಾ?
ವಿದ್ಯಾರ್ಥಿಗಳಿಗೆ ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಒಂದುವೇಳೆ ವಿದ್ಯಾರ್ಥಿಗಳು ಫಲಿತಾಂಶವನ್ನು ತಿರಸ್ಕರಿಸಿ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.
ಎಸ್‌ಎಸ್‌ಎಲ್‌ಸಿ ಫಲಿತಾಂಶ 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್
https://sslc.karnataka.gov.in/ sslc.karnataka.gov.in kseeb.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಇತರೆ ಮಾಹಿತಿ ನಮೂದಿಸಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ


Click it and Unblock the Notifications











