2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇಂದು ಪ್ರಕಟ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ವೀಕ್ಷಿಸಬಹುದು.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEEB) ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯನ್ನು ಕರ್ನಾಟಕದೆಲ್ಲೆಡೆ ಒಟ್ಟು 3,440 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಿತ್ತು. ಪರೀಕ್ಷೆಗೆ ಒಟ್ಟು 8.73 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು, ಈ ಪೈಕಿ 4.21 ಲಕ್ಷ ವಿದ್ಯಾರ್ಥಿನಿಯರು ಮತ್ತು 4.52 ಲಕ್ಷ ವಿದ್ಯಾರ್ಥಿಗಳಿದ್ದರು.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2022 : ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1: ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://sslc.karnataka.gov.in/ ಮತ್ತು https://karresults.nic.in/ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಇತರೆ ಮಾಹಿತಿ ನಮೂದಿಸಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ವಿದ್ಯಾರ್ಥಿಗಳು ಫಲಿತಾಂಶ ಮತ್ತು ಅಂಕಪಟ್ಟಿಯನ್ನು ವೀಕ್ಷಿಸಿದ ಬಳಿಕ ಪ್ರಿಂಟೌಟ್ ತೆಗೆದಿಟ್ಟುಕೊಳ್ಳುವುದು ಪ್ರಮುಖವಾಗಿರುತ್ತದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ ತಿಂಗಳ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುವುದು.